ಮಂಗಳೂರು: ಪೊಲೀಸ್ ಇಲಾಖೆಯಲ್ಲಿ ದಕ್ಷ, ಪ್ರಾಮಾಣಿಕ ಸೇವೆ ಸಲ್ಲಿಸಿದ ಸತೀಶ್, ಜಯಾನಂದ ರವರಿಗೆ ಪ್ರತಿಷ್ಠಿತ ಮುಖ್ಯಮಂತ್ರಿ ಪದಕ ಪ್ರದಾನ

ಕರಾವಳಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ 153 ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ 2025ನೇ ಸಾಲಿನ “ಮುಖ್ಯಮಂತ್ರಿ ಪದಕ” ಲಭಿಸಿದೆ. ಏಪ್ರಿಲ್ 2 ರಂದು ಬೆಂಗಳೂರಿನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಪದಕ ಪ್ರದಾನ ಮಾಡಿದ್ದಾರೆ.

ಕುರಿಯ ಗ್ರಾಮದ ಮಾವಿನಕಟ್ಟೆ ನಿವಾಸಿ ಸತೀಶ್ ಅವರು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ರೌಡಿನಿಗ್ರಹ ದಳ, ಅಪರಾಧ ಪತ್ತೆ ದಳ, ಸೈಬರ್ ಅಪರಾಧ ಪತ್ತೆ ದಳ, ಜಿಲ್ಲಾ ವಿಶೇಷ ತನಿಖಾ ತಂಡ ಸೇರಿದಂತೆ ಹಲವು ಪ್ರಮುಖ ವಿಭಾಗಗಳಲ್ಲಿ ಸೇವೆ ಸಲ್ಲಿಸಿ ತಮ್ಮ ದಕ್ಷ ಕಾರ್ಯಕ್ರಮತೆಯನ್ನು ಮೆರೆದಿದ್ದಾರೆ. ಬಜಪೆ, ಪಣಂಬೂರು, ಸುರತ್ಕಲ್, ಮುಲ್ಕಿ, ಮತ್ತು ಉರ್ವ ಸೈಬರ್ ಕ್ರೈಂ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ಮತಿ ಪಡೆದು, ಪ್ರಸ್ತುತ ಬಜ್ಪೆ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ನೀಡುವ ಗೌರವಾನ್ವಿತ “ಮುಖ್ಯಮಂತ್ರಿ ಪದಕ” ಕ್ಕೆ ಇವರು ಭಾಜನರಾಗಿ ಏಪ್ರಿಲ್ 2 ರಂದು ಬೆಂಗಳೂರಿನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳಿಂದ ಪದಕ ಸ್ಪೀಕರಿಸಿ, ಜಿಲ್ಲೆಗೆ ಮಾತ್ರವಲ್ಲದೆ ಪೊಲೀಸ್ ಇಲಾಖೆಗೂ ಗೌರವ ತಂದಿರುತ್ತಾರೆ.

ಪೊಲೀಸ್ ಇಲಾಖೆಯಲ್ಲಿ ದಕ್ಷ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ, ಸಾರ್ವಜನಿಕರ ಹಾಗೂ ಮೇಲಾಧಿಕಾರಿಗಳ ಪ್ರೀತಿ-ವಿಶ್ವಾಸ ಗಳಿಸಿ, ಅಪರಾಧ ಪತ್ತೆ ವಿಭಾಗ ಹಾಗೂ ಗುಪ್ತ ಮಾಹಿತಿ ವಿಭಾಗದಲ್ಲಿ ಸೇವೆ ಸಲ್ಲಿಸಿ, ಉತ್ತಮ ಸಾಧನೆ ಮಾಡಿದ, ಪ್ರಸ್ತುತ ಮಂಗಳೂರು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಜಯಾನಂದ ನೂಜಿಬೈಲು, ಈಶ್ವರ ಮಂಗಳ, ಪುತ್ತೂರು. ಇವರು 2025- 2026 ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿ ಎಪ್ರಿಲ್ ಎರಡರಂದು ಬೆಂಗಳೂರಿನಲ್ಲಿ ನಡೆದ ವಿಶೇಷ ಸಮಾರಂಭ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳಿಂದ ಪದಕವನ್ನು ಸ್ವೀಕರಿಸಿರುತ್ತಾರೆ. ಪೊಲೀಸ್ ಇಲಾಖೆಯಲ್ಲಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ, ಮುಖ್ಯಮಂತ್ರಿಗಳ ಪದಕ ಪಡೆದ ಉಪ ನಿರೀಕ್ಷಕ ಸತೀಶ್ ಹಾಗೂ ಎಚ್.ಸಿ ದಯಾನಂದ ರವರಿಗೆ ಗೌರವ ಪೂರ್ವಕ ಅಭಿನಂದನೆಗಳು.