ದಿನಾಂಕ:03.04.2026 ರಂದು ಮುಂಜಾನೆ, ಪೆರಿಯಶಾಂತಿ ಕಡೆಯಿಂದ ಮರ್ಧಾಳ ಕಡೆಗೆ ಒಂದು ಕಂಟೈನರ್ ಲಾರಿಯಲ್ಲಿ ಅಕ್ರಮವಾಗಿ ಜಾನುವಾರು ತುಂಬಿಸಿಕೊಂಡು ಸಾಗಾಟ ಮಾಡುತ್ತಿರುವುದಾಗಿ ಜಂಬುರಾಜ್ ಮಹಾಜನ್ ಪೊಲೀಸ್ ಉಪನಿರೀಕ್ಷಕರು ಕಡಬ ಪೊಲೀಸ್ ಠಾಣೆರವರಿಗೆ ಮಾಹಿತಿ ಬಂದ ಮೇರೆಗೆ, ಸಿಬ್ಬಂದಿಗಳೊಂದಿಗೆ ನೂಜಿಬಾಳ್ತಿಲ ಗ್ರಾಮದ ಕನ್ವರೆ ಎಂಬಲ್ಲಿ KA-11 B-9413 ನೇ ನೋಂದಣಿಯ ಕಂಟೇನರ್ ಲಾರಿಯನ್ನು ಪರಿಶೀಲಿಸಿದಾಗ ಲಾರಿಯಲ್ಲಿ 20 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿರುವುದು ಕಂಡುಬಂದಿರುತ್ತದೆ.
ಲಾರಿಯಲ್ಲಿದ್ದಾತನಲ್ಲಿ ವಿಚಾರಿಸಲಾಗಿ ಹಾಸನ ಬೇಲೂರು ನಿವಾಸಿ ಇರ್ಫಾನ್ (26) ಎಂಬುದಾಗಿ ತಿಳಿಸಿರುತ್ತಾನೆ . ಸದ್ರಿ ಜಾನುವಾರುಗಳನ್ನು ಸಾಗಾಟ ಮಾಡಲು ಪರವಾನಿಗೆ ಬಗ್ಗೆ ವಿಚಾರಿಸಲಾಗಿ ಯಾವುದೇ ಪರವಾನಿಗೆ ಇರುವುದಿಲ್ಲ ಹಾಗೂ ಜಾನುವಾರುಗಳನ್ನು ಹಾಸನದಿಂದ ಕೇರಳಕ್ಕೆ ಸಾಗಾಟ ಮಾಡುತ್ತಿರುವುದಾಗಿ ತಿಳಿಸಿರುತ್ತಾನೆ. ಸದ್ರಿ ಲಾರಿ ಹಾಗೂ ಜಾನುವಾರುಗಳನ್ನು ಸ್ವಾಧೀನಪಡಿಸಿ, ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ: 36/2026, ರಂತೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
