ಸಚಿವ ಜಮೀರ್ ಅಹ್ಮದ್ ಅವರ ಹೆಸರನ್ನು ಹಾಳು ಮಾಡಲು ಸಂಚು, ಮುಸ್ಲಿಮರನ್ನು ಕೆಣಕಿದರೆ ಕಾಂಗ್ರೆಸಿಗೆ ತಕ್ಕ ಪಾಠ

ರಾಜ್ಯ

2028ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 20 ಸೀಟು ಬರುವುದು ಕೂಡ ಕಷ್ಟ: ವಿಶ್ವ ಮುಸ್ಲಿಂ ಪರಿಷತ್

ದಾವಣಗೆರೆ ಉಪ ಚುನಾವಣೆಯ ಕುರಿತಾಗಿ ಕಾಂಗ್ರೆಸ್ ಹೈಕಮಾಂಡ್‌ಗೆ ಸಲ್ಲಿಕೆಯಾದ ವರದಿಯಲ್ಲಿ ಸಚಿವ ಜಮೀರ್ ಅಹ್ಮದ್ ಅವರ ಹೆಸರನ್ನು ಹಾಳು ಮಾಡಲು ಸಂಚು ನಡೆಯುತ್ತಿದೆ. ಒಂದು ವೇಳೆ ಜಮೀರ್ ಅಹ್ಮದ್ ಅವರ ತಲೆದಂಡ ಮಾಡಿದರೆ ಅಥವಾ ಅವರನ್ನು ಕೆಣಕಿದರೆ, 2028ರ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 20 ಸೀಟು ಬರುವುದು ಕೂಡ ಕಷ್ಟವಾಗಲಿದೆ’ ವಿಶ್ವ ಮುಸ್ಲಿಂ ಪರಿಷತ್ ಎಚ್ಚರಿಕೆ ರವಾನಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಶ್ವ ಮುಸ್ಲಿಂ ಪರಿಷತ್ ಮುಖ್ಯ್ಥ ಸುಬಾನ್ ಖಾನ್, ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ನಾಯಕರಿಗೆ ನೇರ ಎಚ್ಚರಿಕೆ ನೀಡಿದ್ದಾರೆ. ‘ಸಚಿವ ಜಮೀರ್ ಅಹ್ಮದ್ ಅವರ ಹೆಸರನ್ನು ಹಾಳು ಮಾಡಲು ಸಂಚು ನಡೆಯುತ್ತಿದೆ. ಒಂದು ವೇಳೆ ಜಮೀರ್ ಅಹ್ಮದ್ ಅವರ ತಲೆದಂಡ ಮಾಡಿದರೆ ಅಥವಾ ಅವರನ್ನು ಕೆಣಕಿದರೆ, 2028ರ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 20 ಸೀಟು ಬರುವುದು ಕೂಡ ಕಷ್ಟವಾಗಲಿದೆ’ ಎಂದು ಭವಿಷ್ಯ ನುಡಿದಿದ್ದಾರೆ. ಇತ್ತೀಚೆಗೆ ಅಬ್ದುಲ್ ಜಬ್ಬಾರ್ ಮತ್ತು ನಸೀರ್ ಅಹ್ಮದ್ ವಿರುದ್ಧ ಪಕ್ಷ ಕೈಗೊಂಡ ಕ್ರಮದ ಬಗ್ಗೆ ಸುಬಾನ್ ಖಾನ್ ಅಸಮಾಧಾನ ಹೊರಹಾಕಿದ್ದಾರೆ.