ನಿಷೇದಿತ ಮಾದಕವಸ್ತು ಮಾರಾಟ ಪ್ರಕರಣದ ಆರೋಪಿಗೆ ಶಿಕ್ಷೆ ಮತ್ತು ದಂಡ ವಿಧಿಸಿದ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ

ಕರಾವಳಿ

ಬೆಳ್ತಂಗಡಿ ಉಜಿರೆ ರಥಬೀದಿ ಎಂಬಲ್ಲಿ, ದಿನಾಂಕ: 08-03-2009 ರಂದು ಅಂದಾಜು 50 ಸಾವಿರ ರೂ. ಬೆಲೆಬಾಳುವ 1.500 ಕಿ.ಗ್ರಾಂ ತೂಕದ ನಿಷೇದಿತ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಬೆಳ್ತಂಗಡಿ ಠಾಣಾ ಅ.ಕ್ರ 60/09 ರಂತೆ ದಾಖಲಾಗಿದ್ದ ಪ್ರಕರಣದ ಆರೋಪಿ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಟಿ.ಇ ಜೋಸೆಫ್ ಎಂಬಾತನಿಗೆ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಇದರ ನ್ಯಾಯಾಧೀಶರು ದಿನಾಂಕ 10-04- 2026 ರಂದು ಟಿ.ಇ ಜೋಸೆಫ್ ಎಂಬವರನ್ನು ದೋಷಿ ಎಂದು ಪರಿಗಣಿಸಿ ಶಿಕ್ಷೆ ವಿಧಿಸಿರುತ್ತಾರೆ.

NDPS ಕಾಯ್ದೆಯ ಸೆಕ್ಷನ್ 8(c) r/w ಸೆಕ್ಷನ್ 20(b)(ii)(B) ಅಡಿಯಲ್ಲಿ 5 ವರ್ಷಗಳ ಅವಧಿಗೆ ಕಠಿಣ ಜೈಲು ಶಿಕ್ಷೆ ಮತ್ತು ರೂ. 50,000/- ದಂಡ, ದಂಡವನ್ನು ಪಾವತಿಸಲು ವಿಫಲವಾದರೆ, 2 ತಿಂಗಳುಗಳ ಕಾಲ ಕಠಿಣ ಜೈಲು ಶಿಕ್ಷೆ ಮತ್ತು NDPS ಕಾಯ್ದೆಯ ಸೆಕ್ಷನ್ 32-B(f) ಅಡಿಯಲ್ಲಿ 1 ವರ್ಷದ ಅವಧಿಯ ಕಠಿಣ ಜೈಲು ಶಿಕ್ಷೆ ವಿಧಿಸಿರುತ್ತದೆ.

ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರಾಗಿದ್ದ ಬಿ.ಜಿ ಸುಬ್ಬಾಪುರ್ ಮಠ್ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದು, ಸರ್ಕಾರಿ ಅಭಿಯೋಜಕರಾಧ ಶ್ರೀಮತಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಸ್ತಾ ರವರು ಸಮರ್ಥವಾಗಿ ವಾದ ಮಂಡಿಸಿರುತ್ತಾರೆ.