ಮಂಗಳೂರು ನಗರ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನಾಡಿ ನಗರ ಪೊಲೀಸರಿಗೆ ಬಂದ ಖಚಿತ ಮಾಹಿತಿಯಂತೆ ಕೆಎ 70 ಕೆ 3333 ನಂಬರ್ ನ ಬಜಾಜ್ ಫ್ರೀಡಂ ಬೈಕ್ ನಲ್ಲಿ MDMA ಅನ್ನು ಇಟ್ಟುಕೊಂಡು ಬರುತ್ತಿದ್ದ ಆರೋಪಿಗಳಾದ ಪರ್ವೇಜ್ @ ದಾವೂದ್ ಪರ್ವೇಜ್, ಪಿಲಾರು ಹೊಸಗದ್ದೆ ಮನೆ, ಪೆರ್ಮಾನ್ನೂರು ಹಾಗೂ ನಜರತ್ ಅಲಿ ಪಿಲಾರು ಪೆರ್ಮಾನ್ನೂರು ಅಂಚೆ ಮಂಗಳೂರು ತಾಲೂಕು ಎಂಬವರನ್ನು ವಶಕ್ಕೆ ಪಡೆದು ಅವರು ಹೊಂದಿದ್ದ 46,50,000 ಸಾವಿರ ಮೌಲ್ಯದ 465.8 ಗ್ರಾಂ ತೂಕದ MDMA ಮಾದಕ ವಸ್ತುವನ್ನು ಕಂಕನಾಡಿ ನಗರ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿರುತ್ತಾರೆ.
ಆರೋಪಿ ಫರ್ವೇಜ್ ಎಂಬಾತನು ಮಂಗಳೂರಿನ ಯುವ ಸಮುದಾಯ ಮತ್ತು ಕಾಲೇಜು ವಿಧ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಜಿಲ್ಲೆಯ ಹೊರಗಿನಿಂದ ಬೃಹತ್ ಪ್ರಮಾಣದಲ್ಲಿ MDMA ತಂದು ಮಂಗಳೂರು ನಗರದಲ್ಲಿ ಮಾರಾಟ ಮತ್ತು ಸರಬರಾಜು ಮಾಡಲು ಪ್ರಯತ್ನಿಸುತ್ತಿರುವುದು ತನಿಖೆಯಲ್ಲಿ ತಿಳಿದುಬಂದಿರುತ್ತದೆ. ಆರೋಪಿ ಫರ್ವೇಜ್ ಎಂಬಾತನ ವಿರುದ್ದ ಈಗಾಗಲೇ ಪಾಂಡೇಶ್ವರ, ವಾಮಂಜೂರು, ಬಂದರು ಪೊಲೀಸ್ ಠಾಣೆ, ಬೆಂಗಳೂರಿನ ಅಮೃತಹಳ್ಳಿ, ಮತ್ತು ಉಡುಪಿ ಸೆನ್ ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದ್ದು, ಈತನು ರೂಢಿಗತ ಡ್ರಗ್ ಪೆಡ್ಲರ್ ಆಗಿರುತ್ತಾನೆ. ಈತನ ಸ್ನೇಹಿತ ನಜರತ್ ಅಲಿ ಈತನೊಂದಿಗೆ ಡ್ರಗ್ ಪೆಡ್ಲಿಂಗ್ ವ್ಯವಹಾರಕ್ಕೆ ಸಹಕರಿಸುತ್ತಾ ಕೃತ್ಯದಲ್ಲಿ ಭಾಗಿಯಾಗಿರುತ್ತಾನೆ.
