ನ್ಯಾಯಾಲಯಕ್ಕೆ ಹಾಜರಾಗದೆ, ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ.

ಕರಾವಳಿ

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಪ್ರಕರಣದ ಅ.ಕ್ರ.ಸಂ: 260/2014 ರ ಆರೋಪಿ ಬಂಟ್ವಾಳ ಕರಿಯಂಗಳ ನಿವಾಸಿ ದುನಿಯಾ ಶರೀಫ್ @ ಮಹಮ್ಮದ್ ಶರೀಫ್ ಎಂಬಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ದಿನಾಂಕ: 05-05-2026 ರಂದು ವಿದೇಶದಿಂದ ಊರಿಗೆ ಹಿಂದಿರುಗುತ್ತಿದ್ದಾಗ, ಮುಂಬೈ ವಿಮಾನ ನಿಲ್ದಾಣದಲ್ಲಿ ಮುಂಬೈ ಸಹರಾ ಠಾಣಾ ಪೊಲೀಸರ ಸಹಕಾರದೊಂದಿಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಸ್ತಗಿರಿ ಮಾಡಿ, ದಿನಾಂಕ: 06-05-2026 ರಂದು ಮಾನ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಿರುತ್ತಾರೆ. ಮಾನ್ಯ ನ್ಯಾಯಾಧೀಶರು ಆರೋಪಿತರಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತಾರೆ.