ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಕಳವು ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಸಂಬಂಧಿತ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾರಿಯಾಗಿದ್ದ NBW (Non-Bailable Warrant) ಗಳನ್ನು ತಪ್ಪಿಸಿಕೊಂಡು 2018ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಅಬೂಬಕ್ಕರ್ ಸಿದ್ದೀಕ್ @ ಕಾಪ್ರಿ ಸಿದ್ದೀಕ್, ಉಪ್ಪಳ, ಕಾಸರಗೋಡು ನಿವಾಸಿಯಾಗಿದ್ದು, ಈತನ ವಿರುದ್ಧ ಮಂಗಳೂರು ನಗರದ ಉಳ್ಳಾಲ, ಕೊಣಾಜೆ ಹಾಗೂ ಕಂಕನಾಡಿ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 03 NBW ವಾರಂಟ್‌ಗಳು ಬಾಕಿ ಇದ್ದವು.
ಆರೋಪಿಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆ ಅಪರಾಧ ಸಂಖ್ಯೆ: 74/2017 ಕಲಂ: 380, 411 ಐಪಿಸಿ. ಕೊಣಾಜೆ ಪೊಲೀಸ್ ಠಾಣೆ ಅಪರಾಧ ಸಂಖ್ಯೆ: 68/2018 ಕಲಂ: 379, 411 IPC ಹಾಗೂ 4,5,7,8,9,11,12 ಗೋಹತ್ಯೆ ನಿಷೇಧ ಕಾಯ್ದೆ. ಕಂಕನಾಡಿ ಪೊಲೀಸ್ ಠಾಣೆ ಅಪರಾಧ ಸಂಖ್ಯೆ: 149/2017 ಕಲಂ: 379, 411 IPC ಹಾಗೂ 4,5,7,8,9,11,12 ಗೋಹತ್ಯೆ ನಿಷೇಧ ಕಾಯ್ದೆಯನ್ವಯ ಮೂರು ಪ್ರಕರಣಗಳಲ್ಲಿ NBW ವಾರಂಟ್ ಜಾರಿಯಲ್ಲಿತ್ತು.
ಆರೋಪಿ ಈ ಮೇಲ್ಕಂಡ ಪ್ರಕರಣಗಳಲ್ಲಿ 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ನಗರದಲ್ಲಿ ತಲೆಮಾರೆಸಿಕೊಂಡಿರುವ ವಾರಂಟ್ ಆಸಾಮಿಗಳ ಪತ್ತೆಗೆ ಬಗ್ಗೆ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದ್ದು, ಈತನ ಚಲನವಲನಗಳ ಕುರಿತು ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿದ PSI ಶ್ರೀ ಸಿದ್ದಪ್ಪ ಹಾಗೂ ಪೊಲೀಸ್ ಸಿಬ್ಬಂದಿಗಳ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಿ, ಮಾನ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆರೋಪಿ ಅಬೂಬಕ್ಕರ್ ಸಿದ್ದೀಕ್ @ ಕಾಪ್ರಿ ಸಿದ್ದೀಕ್ ನಿಗೆ ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
