ವಿಟ್ಲ ಠಾಣಾ ಪೊಲೀಸರ ಕಾರ್ಯಾಚರಣೆ; 34 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಕರಾವಳಿ

ಕಾರೊಂದರಲ್ಲಿ ಅಕ್ರಮವಾಗಿ ಪೆಟ್ರೋಲ್ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಜೇಶ್ವರ ನಿವಾಸಿ ಇಬ್ರಾಹಿಂ ಹಾಗೂ ಸಿದ್ದೀಕ್ ಎಂಬವರುಗಳ ವಿರುದ್ದ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಅ.ಕ್ರ. ಸಂ: 124/1992 ರಲ್ಲಿ ಪೆಟ್ರೋಲಿಯಂ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪೈಕಿ ಸಿದ್ದೀಕ್ ಎಂಬಾತನು ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದನು.

ಈತನನ್ನು ದಿನಾಂಕ: 11.05.2026 ರಂದು ರಾತ್ರಿ, ವಿಟ್ಲ ಠಾಣಾ ಪ್ರೊಬೇಶನರ್ ಪಿಎಸ್ಐ ಸಿದ್ದಪ್ಪ, ಎಎಸ್ಐ ಜಯರಾಮ್, ಸಿಬಂದಿಗಳಾದ ಗೋಪಾಲ್, ಯಂಕಪ್ಪ, ಶ್ರೀಶೈಲ್ ಜೋರಾಪುರ ರವರುಗಳ ತಂಡ ಕನ್ಯಾನ ಗ್ರಾಮದ ಕಬ್ಬಿನಮೂಲೆ ಎಂಬಲ್ಲಿ ದಸ್ತಗಿರಿ ಮಾಡಿ, ಮುಂದಿನ ಕಾನೂನು ಕ್ರಮಕ್ಕಾಗಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.