ಆಫ್ರಿಕಾ ದೇಶದಲ್ಲಿ ಕಂಡು ಬಂದಿರುವ ಎಬೋಲಾ ವೈರಸ್ಗೆ ಯಾವುದೇ ಅಧಿಕೃತ ಲಸಿಕೆ ಅಥವಾ ಚಿಕಿತ್ಸೆ ಲಭ್ಯವಿಲ್ಲ. ಈ ವೈರಸ್ ಸೋಂಕು ತಗುಲಿದರೆ ಸಾವಿನ ಪ್ರಮಾಣ ಅತ್ಯಂತ ಹೆಚ್ಚಾಗಿರುತ್ತದೆ. ಇದು ಕೋವಿಡ್ ನಂತೆ ಅತಿ ವೇಗವಾಗಿ ಹರಡುವ ಸಾಧ್ಯತೆ ತೀರಾ ಕಡಿಮೆಯಂತೆ. ಈ ವೈರಸ್ ಮೂಲತಃ ಫ್ರೂಟ್ ಬಾವಲಿಗಳಿಂದ ಮನುಷ್ಯರಿಗೆ ಹರಡುತ್ತದೆ. ಇನ್ನು ಮನುಷ್ಯರಿಂದ ಮನುಷ್ಯರಿಗೆ ಹರಡಲು ಸೋಂಕಿತರ ರಕ್ತ ಅಥವಾ ಶರೀರದ ದ್ರವಗಳ ನೇರ ಸಂಪರ್ಕ ಅಗತ್ಯವಾಗಿರುತ್ತದೆ.
ಸದ್ಯಕ್ಕೆ ಭಾರತದಲ್ಲಿ ಯಾವುದೇ ಎಬೋಲಾ ಪ್ರಕರಣಗಳು ವರದಿಯಾಗಿಲ್ಲ. ಆದರೂ, ಹೈ-ರಿಸ್ಕ್ ಹೊಂದಿರುವ ಕಾಂಗೋ, ಉಗಾಂಡ ಸೇರಿದಂತೆ ಇತರೆ ಆಫ್ರಿಕಾ ದೇಶಗಳಿಂದ ಭಾರತಕ್ಕೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರ ಬಗ್ಗೆ ತೀವ್ರ ಎಚ್ಚರಿಕೆ ವಹಿಸಬೇಕಾಗಿದೆ. ದೇಶದ ಸುರಕ್ಷತೆಯ ದೃಷ್ಟಿಯಿಂದ ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯ ಸ್ಕ್ರೀನಿಂಗ್ ನಡೆಸುವ ಜೊತೆಗೆ, ಅಗತ್ಯವಿದ್ದರೆ ಆಫ್ರಿಕಾ ಪ್ರವಾಸಿಗರಿಗೆ ಕ್ವಾರಂಟೈನ್ ವ್ಯವಸ್ಥೆ ಮಾಡುವುದು ಅತ್ಯಂತ ಅವಶ್ಯಕವಾಗಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಅಲ್ಲದೆ ಸಾರ್ವಜನಿಕರು ಸದ್ಯದ ಪರಿಸ್ಥಿತಿಯಲ್ಲಿ ಆಫ್ರಿಕಾ ದೇಶಗಳ ಪ್ರವಾಸದಿಂದ ದೂರವಿರುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ.
ತೀವ್ರ ಜ್ವರ ಮತ್ತು ತಲೆನೋವು
ಅತಿಯಾದ ಮೈಕೈನೋವು
ವಾಂತಿ ಮತ್ತು ಭೇದಿ ಮತ್ತು ಶ್ವಾಸಕೋಶದ ವೈಫಲ್ಯ ಸಂಭವಿಸಿ ಸಾವು ಸಂಭವಿಸಬಹುದು. ಕೊರೊನಾ ಬಳಿಕ ಜಗತ್ತನ್ನು ಕಾಡುತ್ತಿರುವ ಎಬೋಲಾ ವೈರಸ್ ತಡೆಗಟ್ಟಲು ಜಾಗತಿಕ ಮಟ್ಟದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಆತಂಕ ಪಡದೆ ಜಾಗರೂಕರಾಗಿರಲು ಸೂಚಿಸಲಾಗಿದೆ.
