ಉಪ್ಪಿನಂಗಡಿ ಠಾಣಾ ಅ.ಕ್ರ.ಸಂ: 158/2015ರ ಪ್ರಕರಣದಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸರಿ ಸುಮಾರು ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ @ ಬೋಜ ಅಕ್ರ ಎಂಬಾತನನ್ನು ದಿನಾಂಕ: 22-05-2026 ರಂದು, ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸೈ ಕೌಶೀಕ್ ಬಿ.ಸಿ, ನೇತ್ರತ್ವದ ತಂಡ ಆರೋಪಿಯನ್ನು ಮಂಗಳೂರಿನ ಪಣಂಬೂರು ಎಂಬಲ್ಲಿ ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.
ಆರೋಪಿ ಅಕ್ರಂ @ ಬೋಜ ಅಕ್ರ ನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಆರೊಪಿಯ ವಿರುದ್ಧ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂರು ಪ್ರಕರಣಗಳು ಮತ್ತು ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಪ್ರಕರಣ ದಾಖಲಾಗಿರುತ್ತದೆ.
