ಮೊಹಮ್ಮದ್ ಅಶ್ರಫ್ @ ಅಜ್ಜು @ ನಿಜಾಮ್ @ ಅಡ್ಡು @ ಸಮೀರ್, ಮಾವಿನಕಟ್ಟೆ, ಅಜಿಲಮೊಗರು, ಬೆಳ್ತಂಗಡಿ. ಎಂಬಾತ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ “ಬಿ” ರೌಡಿ ಶೀಟರ್ ಆಗಿದ್ದು, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ದ ಹಲವು ಪ್ರಕರಣಗಳು ದಾಖಲಾಗಿದೆ. ಆರೋಪಿತನು ಪ್ರಕರಣಕ್ಕೆ ಸಂಬಂದಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಈತನಿಗೆ ವಾರೆಂಟ್ ಜಾರಿಗೊಳಿಸಿತ್ತು.
ಈತನ ವಿರುದ್ದ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅ.ಕ್ರ.ಸಂ: 136/2018, ಅ.ಕ್ರ.ಸಂ: 119/2024, ಅ.ಕ್ರ.ಸಂ: 130/2024, ಅ.ಕ್ರ.ಸಂ: 119/2024 ರಂತೆ ನಾಲ್ಕು ಪ್ರಕರಗಳು ದಾಖಲಾಗಿ, ಎಲ್ ಪಿ ಸಿ ವಾರಂಟ್ ಜಾರಿಯಾಗಿತ್ತು.
ಈತನ ವಿರುದ್ದ ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ,ಸಂ: 232/2017ರ ಪ್ರಕರಣದಲ್ಲಿಯೂ ನ್ಯಾಯಾಲಯವು ವಾರೆಂಟ್ ಹೊರಡಿಸಿರುತ್ತದೆ. ಸುರತ್ಕಲ್ ಪೊಲೀಸ್ ಠಾಣಾ ಅ.ಕ್ರ.ಸಂ: 63/2025 ಈ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದನು. ಸುಮಾರು ಎರಡು ವರ್ಷಗಳಿಂದ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ದಿನಾಂಕ 26-05-2026 ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗಳು ಈತನನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿ ಮೊಹಮ್ಮದ್ ಅಶ್ರಫ್ @ ಅಜ್ಜು @ ನಿಜಾಮ್ @ ಅಡ್ಡು @ ಸಮೀರ್, ಮಾವಿನಕಟ್ಟೆ ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
