ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಅ.ಕ್ರ:ಸಂ: 53/2018, ಕಲಂ 448, 506, 354 ಐಪಿಸಿ & ಕಲಂ 12 ಪೋಕ್ಸೋ ಕಾಯ್ದೆಯಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಪುತ್ತೂರು ನರಿಮೊಗರು ನಿವಾಸಿ ನಮನ್ ನಾಯಕ್ (32) ಎಂಬಾತನನ್ನು ಪುತ್ತೂರು ನಗರ ಪೊಲೀಸರು ಬೆಂಗಳೂರಿನ ಕೂಡ್ಲುಪೇಟೆ ಎಂಬಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
