ಉಪ್ಪಿನಂಗಡಿ: ದರೋಡೆ ಪ್ರಕರಣ; ಆರೋಪಿಗಳಿಗೆ ಶಿಕ್ಷೆ ಪ್ರಕಟ:

ಕರಾವಳಿ

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಳಂತಿಲ ಎಂಬಲ್ಲಿ, 2023 ರಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 34/2023 ರಂತೆ ಪ್ರಕರಣ ದಾಖಲಾಗಿತ್ತು. ದರೋಡೆ ಪ್ರಕರಣದ ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕರಾಗಿದ್ದ ರವಿ ಬಿ.ಎಸ್ ರವರು ಅಗತ್ಯ ಸಾಕ್ಷಿಗಳನ್ನು ಕಲೆ ಹಾಕಿ, ಆರೋಪಿಗಳಾದ ಬೆಳ್ತಂಗಡಿ ಇಳಂತಿಲ ನಿವಾಸಿ ರಾಜೀಮ್ ಹಾಗೂ ಕೊಕ್ಕಡ ನಿವಾಸಿ ಮುಸ್ತಫಾ ಎಂಬವರುಗಳನ್ನು ಬಂಧಿಸಿ, ಆರೋಪಿಗಳ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಸದ್ರಿ ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ PSCJ ಮತ್ತು JMFC ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ಮನು ಬಿ.ಕೆ ರವರು, ಆರೋಪಿಗಳ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳಿಗೂ ಕಲಂ 392, 216(A)IPC ಮತ್ತು 196, 115r/w 190(2) IMV ACT ಅಡಿಯಲ್ಲಿ ತಲಾ 10 ಸಾವಿರ ರೂ. ದಂಡ ಮತ್ತು 3 ವರ್ಷ ಸಾದಾ ಕಾರಾಗೃಹ ಶಿಕ್ಷೆ ನೀಡಿ ಅದೇಶಿಸಿಸುತ್ತಾರೆ. ಸಹಾಯಕ ಸರ್ಕಾರಿ ಅಭಿಯೋಜಕರಾದ ದಿವ್ಯರಾಜ ಹೆಗ್ಡೆರವರು ಸಮರ್ಥವಾಗಿ ವಾದ ಮಂಡಿಸಿ, ಆರೋಪಿಗಳನ್ನು ಶಿಕ್ಷೆಗೆ ಗುರಿ ಪಡಿಸುವಲ್ಲಿ ಯಶಸ್ವಿಯಾಗಿರುತ್ತಾರೆ.