ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕಳ್ಳತನ ಪ್ರಕರಣದಲ್ಲಿ ಆರೋಪಿಯಾದ ಪುತ್ತೂರು ಚಿಕ್ಕಮುಡ್ನೂರು ನಿವಾಸಿ ಮೊಹಮ್ಮದ್ ಸಲಾಂ @ K. M. ಸಲಾಂ @ ಡಾಲರ್ ಸಲಾಂ ಎಂಬಾತನು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು ವಿಟ್ಲ ಠಾಣಾ ಪೊಲೀಸರು ದಿನಾಂಕ:16.06 2026 ರಂದು ಪುತ್ತೂರು ರೈಲ್ವೆ ನಿಲ್ದಾಣದ ಬಳಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಆರೋಪಿ ಡಾಲರ್ ಸಲಾಂ ಎಂಬಾತನ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ:ಸಂ 45/2023, ವಿಟ್ಲ ಪೊಲೀಸ್ ಠಾಣಾ ಅ.ಕ್ರ.ಸಂ: 24/2020, 34/2022 ರಂತೆ ಪ್ರಕರಣ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ವಾರೆಂಟ್ ಜಾರಿಯಾಗಿತ್ತು.
