ಸರಕಾರಿ ಆಸ್ಪತ್ರೆಗಳನ್ನು ಖಾಸಗೀ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಆರೋಗ್ಯ ಇಲಾಖೆಯ ಆದೇಶವನ್ನು ರದ್ದುಗೊಳಿಸಬೇಕು, ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಬೇಕು ಎಂಬ ಬೇಡಿಕೆಯ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸರಕಾರಿ ಆಸ್ಪತ್ರೆಗಳ ಮುಂಭಾಗ ಹೋರಾಟ, ಅಭಿಯಾನ ನಡೆಯುತ್ತಿದೆ. ಅದರ ಭಾಗವಾಗಿ ಬಜ್ಪೆ ಪಟ್ಟಣದಲ್ಲಿ ಮಾನವ ಸರಪಳಿ ಕಾರ್ಯಕ್ರಮ ನಡೆಸುವ ಕುರಿತು ಇಂದು ದಲಿತ ಸಂಘರ್ಷ ಸಮಿತಿಯ ಮುಂದಾಳತ್ವದಲ್ಲಿ “ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ” ಯ ಸಭೆ ನಡೆಯಿತು. ಸ್ಥಳೀಯ ಸಂಘಸಂಸ್ಥೆಗಳು, ಸಮಾನ ಮನಸ್ಕರು ಸಭೆಯಲ್ಲಿ ಭಾಗವಹಿಸಿದರು.
ಮೇಲ್ಕಂಡ ಬೇಡಿಕೆಯ ಜೊತೆಯಲ್ಲಿ ಬಜ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕು ಎಂಬ ಬೇಡಿಕೆಯನ್ನು ಸೇರಿಸಿಕೊಂಡು ಜುಲೈ 07 ರಂದು ಸಂಜೆ 5 ಗಂಟೆಗೆ ಬಜ್ಪೆ ಪೇಟೆಯಲ್ಲಿ ಬೃಹತ್ ಮಾನವ ಸರಪಳಿ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಯಿತು.

ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕರಾದ ಮುನೀರ್ ಕಾಟಿಪಳ್ಳ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಸದಾಶಿವ ಪಡುಬಿದ್ರೆ, ಮುಖಂಡರಾದ ರಘು ಎಕ್ಕಾರು, ಕೃಷ್ಣಾನಂದ ಡಿ, ಸಂಕಪ್ಪ ಕಾಂಚನ್, ರುಕ್ಕಯ್ಯ ಅಮೀನ್ ಕರಂಬಾರು, ಸಿಪಿಐಎಂ ಗುರುಪುರ ವಲಯ ಕಾರ್ಯದರ್ಶಿ ಸದಾಶಿವ ದಾಸ್, ಕಾರ್ಮಿಕ ಮುಖಂಡರಾದ ನೋಣಯ್ಯ ಗೌಡ, ಸಾಮಾಜಿಕ ಕಾರ್ಯಕರ್ತರಾದ ಬಾವ ಪದರಂಗಿ, ಇಡ್ಮಾ ಖಾದರ್, ರಶೀದ್ ಸುರಲ್ಪಾಡಿ, ವಿವಿಧ ಸಂಘಟನೆಗಳ ಪ್ರತಿನಿಧಿಗಳಾದ ನ್ಯಾಯವಾದಿ ಮನೋಜ್ ವಾಮಂಜೂರು, ಶ್ರೀನಾಥ್ ಕುಲಾಲ್, ರಾಬರ್ಟ್ ಫ್ರಾಂಕ್ಲಿನ್ ರೇಗೊ, ಸ್ಟಾನ್ಲಿ ರೋಡ್ರೀಗ್ರಸ್, ಜಾನ್ ಪೀಟರ್, ಅಜ್ಮಲ್ ಕಾನ, ಎಮ್ ಕೆ ಅಶ್ರಫ್, ಹಸೈನಾರ್ ಜೋಕಟ್ಟೆ ಮುಂತಾದವರು ಉಪಸ್ಥಿತರಿದ್ದರು.
