ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ, ಆಕೆಯೊಂದಿಗೆ ದೈಹಿಕ ಸಂಪರ್ಕ, ಬಾಲಕಿ ಗರ್ಭಿಣಿ. ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ಕರಾವಳಿ

ಹಿಂದೂ ಸಂಘಟನೆಯಲ್ಲಿರುವ ಮನೀಶ್ ಪೂಜಾರಿಯಿಂದ ಹೇಯ ಕೃತ್ಯ.!

ಸುರತ್ಕಲ್ ಠಾಣಾ ವ್ಯಾಪ್ತಿಯ ಕಾಟಿಪಳ್ಳದಲ್ಲಿ ಪಿಯುಸಿ ಮೊದಲ ವರ್ಷ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಟಿಪಳ್ಳ 3ನೇ ಬ್ಲಾಕ್ ನಿವಾಸಿ ಸಂತೋಷ್ ಡಿಸೋಜ ಎಂಬವರ ಹದಿನೇಳು ವರ್ಷದ ಪುತ್ರಿ ಸಾವನ್ನಪ್ಪಿದ ವಿದ್ಯಾರ್ಥಿನಿ. ಸ್ಥಳೀಯ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ನಿನ್ನೆ ಸಂಜೆ ಕಾಲೇಜಿನಿಂದ ಮನೆಗೆ ಬಂದು, ಡೆತ್ ನೋಟ್ ಬರೆದಿಟ್ಟು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಮಯದಲ್ಲಿ ತಾಯಿ ಮನೆಯಲ್ಲೇ ಇದ್ದು, ಕೆಲಸ ಕಾರ್ಯದಲ್ಲಿ ನಿರತರಾಗಿದ್ದರು ಎನ್ನಲಾಗಿದೆ.

ಗಂಜಿಮಠ ಮೂಲದ ಮನೀಶ್ ಪೂಜಾರಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ, ನಂಬಿಕೆ ಹುಟ್ಟಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಳು ಎಂದು ತಿಳಿದುಬಂದಿದೆ. ಈ ವಿಚಾರವನ್ನು ಬಾಲಕಿ ಮನೀಶ್‌ಗೆ ತಿಳಿಸಿದಾಗ, ಆತ ಆಕೆಯನ್ನು ನಿಂದನೆ ಮಾಡಿ ದೂರ ಮಾಡುವ ಪ್ರಯತ್ನ ಮಾಡಿದ್ದಾನೆ ಎನ್ನಲಾಗಿದೆ.

ಆರೋಪಿ ಗಂಜಿಮಠದ ಮೂಲದ ಮನೀಶ್ ಪೂಜಾರಿ ಅಪ್ರಾಪ್ತೆಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಆಕೆ ಜೂನ್ 22ರಂದು ತನ್ನ ತಾಯಿಗೆ ನಡೆದ ವಿಚಾರವನ್ನು ವಿವರವಾಗಿ ತಿಳಿಸಿದ್ದಳು ಎನ್ನಲಾಗಿದೆ. ತಾಯಿ ಆಕೆಗೆ ಧೈರ್ಯತುಂಬಿ ಸಮಾಧಾನಪಡಿಸಿದ್ದರು. ಆದರೆ ತಾಯಿ ಮಂಗಳವಾರ ದಿನ ಬೆಳಗ್ಗೆ ಕೆಲಸಕ್ಕೆ ತೆರಳಿ ಹಿಂದಿರುಗಿ ಮನೆಗೆ ಬಂದಾಗ ಬಾಲಕಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಬಾಲಕಿಯ ತಾಯಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿ ಗಂಜಿಮಠದ ಮನೀಶ್ ಪೂಜಾರಿ ವಿರುದ್ಧ ಪೊಕ್ಸೊ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣದ ಆರೋಪಿಯ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.