ಮಂಗಳೂರು: ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರ ಭೇಟಿ; ಪೌರ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಚರ್ಚೆ

ಕರಾವಳಿ

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ರಘು ಸಿ ರವರನ್ನು ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಬೆಳ್ತಂಗಡಿ ತಾಲೂಕು ಪಟ್ಟಣ ಮತ್ತು ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಸಂಘದ ಪದಾಧಿಕಾರಿಗಳು ಜೂನ್ 28 ರಂದು ಭೇಟಿ ಮಾಡಿ ಪೌರ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.

ಪೌರ ಕಾರ್ಮಿಕರನ್ನು ಖಾಯಂ ಮಾಡಬೇಕು, ಲೋಡರ್ಸ್, ಕ್ಲೀನರ್ಸ ಗಳಿಗೆ ನೇರ ಪಾವತಿ ಮಾಡಬೇಕು, ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೌಕರ್ಯ ಒದಗಿಸಬೇಕು, ಗ್ರಾಮ ಪಂಚಾಯತ್ ಸ್ವಚ್ಚತಾ ಕಾರ್ಯಗಳನ್ನು ಸಂಜೀವಿನಿ ಒಕ್ಕೂಟದಿಂದ ಕೈಬಿಡಬೇಕು, ಗ್ರಾಮ ಪಂಚಾಯತ್ ಸ್ವಚ್ಚತಾ ಕಾರ್ಮಿಕರಿಗೆ ಏಕರೂಪದ ವೇತನ ನೀಡಬೇಕು, ಗ್ರಾಮ ಪಂಚಾಯತ್ ಗಳಲ್ಲಿ ಕೈಬಿಟ್ಟ ಸ್ವಚ್ಚತಾ ಕಾರ್ಮಿಕರನ್ನು ವಾಪಸ್ ಕೆಲಸಕ್ಕೆ ಸೇರ್ಪಡೆ ಮಾಡಬೇಕು, ಪೌರ ಕಾರ್ಮಿಕರು ಸೇರಿದಂತೆ ಗ್ರಾಮ ಪಂಚಾಯತ್ ಸ್ವಚ್ಚತಾ ಕಾರ್ಮಿಕರ ಮೇಲಿನ ಅಧಿಕಾರಿಗಳ ದೌರ್ಜನ್ಯ ನಿಲ್ಲಬೇಕು, ಪೌರ ಕಾರ್ಮಿಕರ ವಿಶ್ರಾಂತಿ ಕೊಠಡಿಯನ್ನು ದುರಸ್ತಿಗೊಳಿಸಬೇಕು ಎಂದು ಆಯೋಗದ ಅಧ್ಯಕ್ಷರ ಗಮನಕ್ಕೆ ತರಲಾಯಿತು.

ಈ ಸಂದರ್ಭದಲ್ಲಿ ಪಟ್ಟಣ ಮತ್ತು ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್ ಸುದೆಮುಗೇರು, ಜೊತೆ ಕಾರ್ಯದರ್ಶಿ ಸುರೇಶ್ ಕೆ ಅರಳಿ, ಮುಖಂಡರಾದ ಶಿವಕುಮಾರ್ ಪುಂಜಾಲಕಟ್ಟೆ, ಉಮೇಶ್ ಪುಂಜಾಲಕಟ್ಟ , ಸಂದೀಪ್ ಅರಳಿ, ವಸಂತ ಕೊಯ್ಯೂರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪೌರ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕಂಕನಾಡಿ, ಕಾರ್ಯದರ್ಶಿ ಎಸ್.ಪಿ‌ ಆನಂದ್ ಮತ್ತು ಪದಾಧಿಕಾರಿಗಳು ಜೊತೆಗಿದ್ದರು.