370ನೇ ವಿಧಿ ರದ್ದತಿಯ ವಾರ್ಷಿಕೋತ್ಸವದ ಹಿನ್ನೆಲೆ: ಅನುಮತಿಯಿಲ್ಲದೆ ಯಾವುದೇ ಸಭೆ, ಸಮಾರಂಭಗಳಿಗೆ ಅವಕಾಶವಿಲ್ಲ: ಜಮ್ಮು-ಕಾಶ್ಮೀರ ಪೊಲೀಸ್

ರಾಷ್ಟ್ರೀಯ

ಶ್ರೀನಗರ: ಬುಧವಾರದಂದು 370ನೇ ವಿಧಿ ರದ್ದತಿಯ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸಾರ್ವಜನಿಕ ಸೂಚನೆಯೊಂದನ್ನು ಹೊರಡಿಸಿದ್ದು, ಅನಧಿಕೃತ ಪ್ರತಿಭಟನೆಗಳು ಅಥವಾ ಮೆರವಣಿಗೆಗಳನ್ನು ನಿಷೇಧಿಸಿದ್ದಾರೆ ಹಾಗೂ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ (PDP) ಪಕ್ಷವು ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ವಿವಿಧ ಜಿಲ್ಲಾ ಪೊಲೀಸ್ ಪ್ರಧಾನ ಕಚೇರಿಗಳು ಈ ಸೂಚನೆಯನ್ನು ಹೊರಡಿಸಿವೆ.

“ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ಯಾವುದೇ ಪ್ರತಿಭಟನೆ, ರ್ಯಾಲಿ, ಮೆರವಣಿಗೆ, ಪ್ರದರ್ಶನ ಅಥವಾ ಇತರ ಯಾವುದೇ ಸಾರ್ವಜನಿಕ ಸಭೆ-ಸಮಾರಂಭಗಳನ್ನು ನಡೆಸುವಂತಿಲ್ಲ ಎಂದು ಸಾರ್ವಜನಿಕರಿಗೆ ತಿಳಿಸಲಾಗುತ್ತಿದೆ,” ಎಂದು ಪೊಲೀಸರು ತಮ್ಮ ಸೂಚನೆಯಲ್ಲಿ ತಿಳಿಸಿದ್ದಾರೆ.