ಬಾಳೆಹಣ್ಣಿಗೆ ಕೃತಕ ಬಣ್ಣ ಬಳಸಿ ಮಾರಾಟದ ಬೃಹತ್ ಜಾಲ; ಅಧಿಕಾರಿಗಳಿಂದ ಮಹತ್ವದ ಕಾರ್ಯಾಚರಣೆ, ಮಂಗಳೂರಿಗೂ ಲಿಂಕ್!

ಕರಾವಳಿ

ಉಡುಪಿ ಜಿಲ್ಲೆಯ ಅಲೆವೂರು ಗ್ರಾಮದ ಬಾಳೆಹಣ್ಣು ದಾಸ್ತಾನು ಕೇಂದ್ರಕ್ಕೆ ಧಿಡೀರ್ ದಾಳಿ ನಡೆಸಿದ ಕುಂದಾಪುರ ಅಸಿಸ್ಟೆಂಟ್ ಕಮಿಷನರ್ ರಶ್ಮಿ ಎಸ್ ಆರ್ ಹಾಗೂ ಆರೋಗ್ಯಾಧಿಕಾರಿಗಳು ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಸುತ್ತಿದ್ದ ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಅಗಸ್ಟ್ 20 ರಂದು ಕೆಸ್ತೂರು ಹಾಗೂ ಮಣಿಪಾಲ ಸಮೀಪದ ದುಗ್ಗಿ ಪರಿಸರದಲ್ಲಿ ಬಾಳೆ ಹಣ್ಣು ರಖಂ ವ್ಯಾಪಾರಸ್ಥರು ಹಾಗೂ ದಾಸ್ತಾನುದಾರರ ಗೋದಾಮುಗಳಿಗೆ ದಾಳಿ ನಡೆಸಿದ ಅಧಿಕಾರಿಗಳು, ನಕಲಿ ಬಣ್ಣ ಹಚ್ಚಿದ್ದ ಸುಮಾರು 5 ಸಾವಿರ ಕೆ.ಜಿ ಬಾಳೆಕಾಯಿಗಳನ್ನು ಸೀಝ್ ಮಾಡಲಾಗಿದೆ. ಮೌಲ್ಯ 4 ರೂಪಾಯಿ ಎಂದು ಅಂದಾಜಿಸಲಾಗಿದೆ. ಬಾಳೆ ಹಣ್ಣಿಗೆ ಬಳಸುತ್ತಿದ್ದ ಆರೋಗ್ಯಕ್ಕೆ ಹಾನಿಕಾರಕ ರಾಸಾಯನಿಕಗಳು, ಕೃತಕ ಬಣ್ಣ ನೀಡುವ ರಾಸಾಯನಿಕಗಳು, ಅದನ್ನು ಬಳಸಲು ಉಪಯೋಗಿಸುವ ಪರಿಕರಗಳನ್ನು ವಶಪಡಿಸಿಕೊಂಡು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೃತ್ಯಕ್ಕೆ ಬಳಸುತ್ತಿದ್ದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಾಳೆಹಣ್ಣುಗಳನ್ನು ಕಾರ್ಕಳ, ಮೂಡುಬಿದಿರೆ ಭಾಗಗಳಿಗೆ ಸರಬರಾಜು ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.