ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಸಂಪ್ಯ ಎಂಬಲ್ಲಿ ದಿನಾಂಕ: 03.09.2019 ರಂದು ಕಾರ್ತಿಕ್ ಮೆರ್ಲ ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಿದ ಅಂದಿನ ತನಿಖಾಧಿಕಾರಿ ಹಾಗೂ ಪೊಲೀಸ್ ನಿರೀಕ್ಷಕರಾಗಿದ್ದ ನಾಗೇಶ್ ಕದ್ರಿರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ, ಪ್ರೀತು @ ಪ್ರೀತೇಶ್ ಸುಲಾಯ, ಚರಣ್, ಕಿರಣ್ @ ಮಣಿ ಹಾಗೂ ಸಂತು @ಸ್ಟಿವನ್ ಮಾಂತೇರೋ ಎಂಬವರುಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ 5 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಯ್ಕ್ ರವರು ಪ್ರೀತು @ ಪ್ರೀತೇಶ್ ಸುಲಾಯ ಹಾಗೂ ಕಿರಣ್ @ ಮಣಿ ಎಂಬವರುಗಳ ವಿರುದ್ಧ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 3 ಲಕ್ಷ ದಂಡ. ಐಪಿಸಿ 341 ರ ಅಡಿಯಲ್ಲಿ 3 ತಿಂಗಳು ಸದಾ ಶಿಕ್ಷೆ, 500 ದಂಡ ವಿಧಿಸಿ ಆದೇಶ ನೀಡಿರುತ್ತಾರೆ.
ಸಂತು @ ಸ್ಟಿವನ್ ಮಾಂತೇರೋನನ್ನು ನೀರ್ದೋಷಿ ಎಂದು ತೀರ್ಪು ನೀಡಿದ್ದು, ಮತ್ತೋರ್ವ ಚರಣ್ ಎಂಬಾತ ಈಗಾಗಲೇ ಮೃತಪಟ್ಟಿರುತ್ತಾನೆ. ಸರ್ಕಾರಿ ಅಭಿಯೋಜಕರಾಗಿ ಜಯಂತಿ ಕೆ, ರವರು ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿ, ಕೊಲೆ ಆರೋಪಿಗಳಿಗೆ ಶಿಕ್ಷೆ ವಿಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
