ತುಂಬೆ ಗ್ರಾಮದ ಕೆಳಗಿನ ತುಂಬೆ ಎಂಬಲ್ಲಿ ದಿನಾಂಕ: 25.09.2026 ರಂದು ಮುಂಜಾನೆ ವೇಳೆ, ನದಿ ಕಿನ್ನಾರೆಯಿಂದ ಅಕ್ರಮವಾಗಿ ಮರಳನ್ನು ತೆಗೆದು, ಲಾರಿಗಳಲ್ಲಿ ತುಂಬಿಸುತ್ತಿರುವುದಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಿಗೆ ಬಂದ ಮಾಹಿತಿ ಮೇರೆಗೆ, ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಮೂರು ಟಿಪ್ಪರ್ ಲಾರಿ ಹಾಗೂ ಒಂದು ಜೆ ಸಿ ಬಿ ಸ್ಥಳದಲ್ಲಿದ್ದು, ಅಕ್ರಮವಾಗಿ ಮರಳು ತುಂಬಿರುವುದು ಕಂಡು ಬಂದಿರುತ್ತದೆ. ಸದ್ರಿಗೆ ಸಂಬಂಧಪಟ್ಟ ನಾಲ್ಕು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.
ಮರಳು ತುಂಬಿಸಿದ್ದ KA-06-D-8454, KA-19-AF 9094, KA-19-AB-1508 ನೊಂದಣಿ ಸಂಖ್ಯೆಯ ಟಿಪ್ಪರ್ ಲಾರಿಗಳನ್ನು ಹಾಗೂ KA-20-N-7175 ಜೆಸಿಬಿ ವಾಹನವನ್ನು, ಸ್ಥಳದಲ್ಲಿದ್ದ ಸುಮಾರು 2 ಲೋಡ್ ಟಿಪ್ಪರ್ ಮತ್ತು ಮರಳು ಲೋಡ್ ಮಾಡಲು ಬಳಸುವ ಸಾಮಾಗ್ರಿಗಳನ್ನು ಸ್ವಾಧೀನಪಡಿಸಲಾಗಿದ್ದು, ಸ್ವಾಧೀನಪಡಿಸಿಕೊಂಡ ಸ್ವತ್ತುಗಳ ಅಂದಾಜು ಮೌಲ್ಯ ಒಟ್ಟು 25,24,700 ರೂ. ಎಂದು ಅಂದಾಜಿಸಲಾಗಿದೆ. ಆರೋಪಿಗಳು ನದಿ ಕಿನಾರೆಯಿಂದ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಮರಳು ಸಂಗ್ರಹಿಸಿ ಲಾರಿಗಳಿಗೆ ಲೋಡ್ ಮಾಡಿ ಸಾಗಿಸುವುದಾಗಿ ಹೇಳಿಕೆ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಿಹಾನ್, ರಾಜೀಕ್, ಮೊಹಮ್ಮದ್ ಶಂಶೀರ್, ಮಹಮ್ಮದ್ ಅಶ್ರಫ್, ಸ್ಟೀವನ್ ಡಿಸೋಜಾ ಎಂಬವರನ್ನು ಹಾಗೂ ಕೃತ್ಯಕ್ಕೆ ಸಹಕರಿಸಿದ ರೈಟರ್ ಶಿವಪ್ರಸಾದ್ ಆಳ್ವ ಮತ್ತು ಇತರರ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 129/2026, ರಂತೆ ಪ್ರಕರಣ ದಾಖಲಿಸಿಕೊಂಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
