ಬೆಳ್ತಂಗಡಿ ನಡ ಗ್ರಾಮ ನಿವಾಸಿ ಡಾ. ಪ್ರದೀಪ ಎ ಎಂಬವರು ಬೆಳ್ತಂಗಡಿ ನಾವೂರ ಎಂಬಲ್ಲಿ ನಡೆಸುತ್ತಿದ್ದ ಕ್ಲಿನಿಕ್ ಗೆ ದಿನಾಂಕ: 06.10.2026 ರಂದು ರಾತ್ರಿ ಯಾರೋ ಕಿಡಿಗೇಡಿಗಳು ಬೆಂಕಿ ಹಾಕಿದ ಪರಿಣಾಮ ಔಷದಿ ಹಾಗೂ ವೈದ್ಯಕೀಯ ಸಲಕರಣೆಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಸುಟ್ಟುಹೋದ ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣಾ ಅ ಕ್ರ: 112/2026 ಕಲಂ: 326(f), 326(G), 324(5) ಬಿಎನ್ಎಸ್ 2023 ರಂತೆ ಪ್ರಕರಣ ದಾಖಲಾಗಿತ್ತು.
ಸದ್ರಿ ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಠಾಣಾ ಪೊಲೀಸರು ಆರೋಪಿಗಳಾದ ಬೆಳ್ತಂಗಡಿ ನಾವೂರು ನಿವಾಸಿಗಳಾದ ರವಿ ಕುಮಾರ್, ಸುರೇಶ್ ಪಿ.ಎನ್, ಮತ್ತು ದಿನೇಶ್ ಪ್ರಭು ಎಂಬವರುಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಕಾನೂನು ಕ್ರಮಕೈಗೊಂಡು ಮಾನ್ಯ ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ.
