ಕೊಲ್ತಮಜಲು ರಹಿಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದು ಪಡಿಸಿದ ಸುಪ್ರೀಂ ಕೋರ್ಟ್

ಕರಾವಳಿ

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿದ್ದು, ಜಾಮೀನು ಆದೇಶವನ್ನು ಸರಕಾರದ ಪರವಾಗಿ ಮಾನ್ಯ ಅಡ್ವೊಕೇಟ್ ಜನರಲ್ ಅವರು ಪ್ರಶ್ನಿಸಿದ್ದರು. ಇದೀಗ ಹೈಕೋರ್ಟ್ ಆರೋಪಿಗಳಿಗೆ ನೀಡಿರುವ ಜಾಮೀನು ಆದೇಶಕ್ಕೆ ದಿನಾಂಕ 15-10-2026 ರಂದು ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಕೊಲೆ ಅರೋಪದಲ್ಲಿ ಆರೋಪಿಗಳು ಜಾಮೀನು ಪಡೆದಿದ್ದರೂ, ಗೂಂಡಾ ಕಾಯ್ದೆಯಡಿ ಆರೋಪಿಗಳು ಬಿಡುಗಡೆಯಾಗದೆ ಜೈಲಿನಲ್ಲಿಯೇ ಮುಂದುವರಿಯಬೇಕಾಗಿತ್ತು.ಇದೀಗ ಆ ಜಾಮೀನು ಆದೇಶವನ್ನು ಸರಕಾರದ ಪರವಾಗಿ ಮಾನ್ಯ ಅಡ್ವೊಕೇಟ್ ಜನರಲ್ ಅವರ ಮೂಲಕ ಪ್ರಶ್ನಿಸಲಾಯಿತು.

ಸುಪ್ರೀಂ ಕೋರ್ಟ್‌ನಲ್ಲಿ ಸರಕಾರದ ಪರವಾಗಿ ವಾದ ಮಂಡಿಸಿದ ವಕೀಲ ಜಗದೀಶ್ ಅವರು ಪ್ರಕರಣಕ್ಕೆ ಸಂಬಂಧಿಸಿದ ಕಾನೂನು ಅಂಶಗಳನ್ನು ನ್ಯಾಯಾಲಯದ ಮುಂದೆ ಮಂಡಿಸಿದರು. ಅವರ ವಾದದ ಹಿನ್ನೆಲೆಯಲ್ಲಿ ಆರೋಪಿಗಳಿಗೆ ಸ್ಥಳೀಯ ನ್ಯಾಯಾಲಯ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಪಡಿಸಿರುವುದು, ಪ್ರಕರಣದ ನ್ಯಾಯಾಂಗ ಪ್ರಕ್ರಿಯೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ.