ಸ್ಟಿಂಗ್ ಆಪರೇಷನ್ ಸಂಬಂಧ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಟಿಂಗ್ ಕಾರ್ಯಾಚರಣೆ ಸಂಬಂಧ ನೀಡಿದ್ದ ದೂರು ಆಧರಿಸಿ ತನಿಖೆ ನಡೆಸುತ್ತಿರುವ ಸಿಸಿಬಿಯ ಸೈಬರ್ ಅಪರಾಧ ಠಾಣೆ ಪೊಲೀಸರು ರಾಕೇಶ್ ಶೆಟ್ಟಿಯನ್ನು ನಿನ್ನೆ ವಿಚಾರಣೆ ನಡೆಸಿ ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ, ನೋಟೀಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಬೆನ್ನಲ್ಲೇ ಬಂಧನ ಭೀತಿಯಿಂದ ರಾಕೇಶ್ ಶೆಟ್ಟಿ 66ನೇ ಸಿಸಿಎಚ್ ಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ನಿರೀಕ್ಷಣಾ ಜಾಮೀನು ಕುರಿತ ಆದೇಶ ಕಾಯ್ದಿರಿಸಲಾಗಿದೆ.
ಮೈಸೂರಿನ ಖಾಸಗಿ ಹೋಟೆಲ್‌ವೊಂದರಲ್ಲಿ ವಾಸ್ತವ್ಯ ಹೂಡಿದ್ದ ರಾಕೇಶ್‌ಶೆಟ್ಟಿ ಅವರನ್ನು ಪೊಲೀಸರು ವಶಕ್ಕೆ ಪಡೆದು ಬೆಂಗಳೂರು ನಗರಕ್ಕೆ ಕರೆತಂದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಈಗಾಗಲೇ ಸೈಬರ್ ಠಾಣೆ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ಕೂಡಾ ನಡೆಸಿ ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ವಿವಾದಾತಕ ಸ್ಟಿಂಗ್ ಕಾರ್ಯಾಚರಣೆ ವಿಡಿಯೋಗಳ ಹಿಂದೆ ದೊಡ್ಡ ರಾಜಕೀಯ ಪಿತೂರಿ ಇದೆ. ಸ್ಟಿಂಗ್ ಕಾರ್ಯಾಚರಣೆಯ ಪ್ರಮುಖ ಆರೋಪಿ ರಾಕೇಶ್ ಶೆಟ್ಟಿ ಬಂಧಿಸುವಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನಗರ ಪೊಲೀಸ್ ಆಯುಕ್ತರು ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿ, ಪ್ರತಿಭಟನೆ ನಡೆಸಿ ಗಡುವು ಕೂಡಾ ನೀಡಿದ್ದರು.
ವಿವಾದಿತ ವಿಡಿಯೋಗಳು ಹರಿದಾಡದಂತೆ ಬೆಂಗಳೂರು ನ್ಯಾಯಾಲಯ ಈಗಾಗಲೇ ಸುಮಾರು 42 ಮಾಧ್ಯಮ ಸಂಸ್ಥೆ ಹಾಗೂ ಡಿಜಿಟಲ್ ಫ್ಲ್ಯಾಟ್‌ಫಾರಂಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಸ್ಟಿಂಗ್ ಆಪರೇಷನ್ ಸಂಬಂಧ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಟಿಂಗ್ ಕಾರ್ಯಾಚರಣೆ ಸಂಬಂಧ ನೀಡಿದ್ದ ದೂರು ಆಧರಿಸಿ ತನಿಖೆ ನಡೆಸುತ್ತಿರುವ ಸಿಸಿಬಿಯ ಸೈಬರ್ ಅಪರಾಧ ಠಾಣೆ ಪೊಲೀಸರು ರಾಕೇಶ್ ಶೆಟ್ಟಿಯನ್ನು ನಿನ್ನೆ ವಿಚಾರಣೆ ನಡೆಸಿ ಮುಂದಿನ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಿ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
