ಪಣಂಬೂರು ಪೊಲೀಸರ ಕಾರ್ಯಾಚರಣೆ: ಗಾಂಜಾ ಮಾರಾಟಗಾರನ ಬಂಧನ; 3.800 ಕಿಲೋ ಗ್ರಾಂ ತೂಕದ ಗಾಂಜಾ ವಶ

ಕರಾವಳಿ

ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ, ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಹತ್ತಿರ ಗಾಂಜಾವನ್ನು ಮಾರಾಟ ಮಾಡಲು ತಂದಿರುವ ಬಗ್ಗೆ ಮಾಹಿತಿ ಪಡೆದ ಉತ್ತರ ಉಪ-ವಿಭಾಗದ ಎ.ಸಿ.ಪಿ. ಶ್ರೀಕಾಂತ್ ರವರ ನೇತ್ರತ್ವದ ತಂಡ ಹಾಗೂ ಪಣಂಬೂರು ಪೊಲೀಸರು ಜಂಟಿ ದಾಳಿ ನಡೆಸಿ, ಮೊಹಮ್ಮದ್ ನಿಸಾರ್ ಪಡ್ಡಾಯೂರು ಹೌಸ್, ಪುತ್ತೂರು ಎಂಬಾತನನ್ನು ದಸ್ತಗಿರಿ ಮಾಡಿ, ಅತನ ವಶದಲ್ಲಿದ್ದ ಸುಮಾರು 3.800 ಕಿಲೋ ಗ್ರಾಂ ಗಾಂಜಾ ಮತ್ತು 1 ಮೊಬೈಲ್ ಪೋನ್ ಹಾಗೂ ಗಾಂಜಾ ಸಾಗಿಸಲು ಬಳಸಿದ KL14 1662 ನಂಬ್ರದ ಕಾರನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ.

ಆರೋಪಿ ಗಾಂಜಾವನ್ನು ಸುರತ್ಕಲ್, ಪಣಂಬೂರು, ಕಾವೂರು ಹಾಗೂ ಮಂಗಳೂರು ನಗರದ ಪ್ರಮುಖ ಸ್ಥಳಗಳಲ್ಲಿ ಮಾರಾಟ ಮಾಡುತ್ತಿದ್ದುದಾಗಿ ತಿಳಿದು ಬಂದಿದ್ದು, ಈ ಹಿಂದೆ ಕೂಡಾ ಹಲವು ಭಾರಿ ಗಾಂಜಾವನ್ನು ಮಂಗಳೂರು ನಗರದಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿರುತ್ತಾನೆ. ಆರೋಪಿಯಿಂದ ಸ್ವಾಧೀನಪಡಿಸಿಕೊಳ್ಳಲಾದ ಸ್ವತ್ತುಗಳ ಒಟ್ಟು ಮೌಲ್ಯ 3,94,000. ರೂಪಾಯಿ ಎಂದು ಅಂದಾಜಿಸಲಾಗಿದ್ದು, ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 137/2026 ರಂತೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.