ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೋರ್ವರಿಗೆ, ಆಕೆಯ ನೆರೆಮನೆಯ ನಿವಾಸಿ ಅನಿಲ್ ಎಂಬಾತನು ಹಲ್ಲೆ ನಡೆಸಿ, ಅತ್ಯಾಚಾರವೆಸಗಿ ಜೀವಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 92/2021 ರಂತೆ ಪ್ರಕರಣ ದಾಖಲಾಗಿ, ಆಗಿನ ಪೊಲೀಸ್ ಉಪನಿರೀಕ್ಷಕರಾಗಿದ್ದ ಪ್ರಸನ್ನ ಎಮ್ ಎಸ್ ರವರು ಆರೋಪಿಯನ್ನು ಪತ್ತೆಮಾಡಿ, ತನಿಖಾಧಿಕಾರಿ ಹಾಗೂ ಬಂಟ್ವಾಳ ವೃತ್ತ ನಿರೀಕ್ಷಕರಾಗಿದ್ದ ಟಿ ಡಿ ನಾಗರಾಜ್ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣದ ಬಗ್ಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಆರೋಪಿ ಅನಿಲ್ ಎಂಬಾತನ ವಿರುದ್ದದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆರವರು ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಮತ್ತು 54 ಸಾವಿರ ರೂ. ದಂಡ ವಿಧಿಸಿ ಅದೇಶಿಸಿರುತ್ತಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಶ್ರಿ ಮೋತಿಲಾಲ ಚೌಧಾರಿರವರು ಸಮರ್ಥವಾಗಿ ವಾದ ಮಂಡನೆ ನಡೆಸಿ, ಆರೋಪಿಗೆ ಶಿಕ್ಷೆ ವಿಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
