ಇಂದು‌ ದೆಹಲಿಯಲ್ಲಿ ಬಿಜೆಪಿ ಸಿಇಸಿ ಸಭೆ; ದ.ಕ ಲೋಕಸಭಾ ಕ್ಷೇತ್ರದಿಂದ ಅಚ್ಚರಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್‌ ಬಹುತೇಕ ಸಾಧ್ಯತೆ.!

ಕರಾವಳಿ

2024 ರ ಲೋಕಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದೆ. ಬಿಜೆಪಿ ಮೊದಲ ಪಟ್ಟಿ ಪ್ರಕಟಿಸಿರುವ ಬೆನ್ನಲ್ಲೇ ಕರ್ನಾಟಕದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಕರ್ನಾಟಕ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆಯಲಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಅಚ್ಚರಿ ಎಂಬಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಕಣಕ್ಕೆ ಇಳಿಯುವುದು ಬಹತೇಕ ಖಚಿತ. ಕಳೆದ ಮೂರು ಅವಧಿಯಿಂದಲೂ ಈ ಕ್ಷೇತ್ರದಿಂದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಸ್ಪರ್ಧೆ ಮಾಡುತ್ತಿದ್ದರು.

ಕೇಂದ್ರ ಬಿಜೆಪಿ ಕೋರ್‌ ಕಮಿಟಿ ಈಗಾಗಲೇ ಸಭೆಯನ್ನು ನಡೆಸಿದ್ದು, ಬಹುತೇಕ ಅಭ್ಯರ್ಥಿಗಳನ್ನು ಅಂತಿಮ ಮಾಡಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಬಿಜೆಪಿ ಹಾಗೂ ಜೆಡಿಎಸ್‌ ಈಗಾಗಲೇ ಕ್ಷೇತ್ರಗಳನ್ನು ಹಂಚಿಕೆ ಮಾಡಿದೆ. ಅದ್ರಲ್ಲೂ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಇದೀಗ ಅಚ್ಚರಿಗೆ ಕಾರಣವಾಗಿದೆ.

ರಾಜ್ಯದ ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿಯಿಂದ ಟಿಕೆಟ್ ಆಯ್ಕೆ ಹಿನ್ನಲೆ, ಇಂದು‌ ದೆಹಲಿಯಲ್ಲಿ ಬಿಜೆಪಿ ಸಿಇಸಿ ಸಭೆ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಭಾಗವಹಿಸಲಿದ್ದಾರೆ.