ರಾಜ್ಯದಲ್ಲಿ ಬಾಂಬೆ ಮಿಠಾಯಿ ಹಾಗೂ ಗೋಬಿ ಮಂಚೂರು ನಿಷೇದದ ಬಗ್ಗೆ ನಾಳೆ ಅಧಿಕೃತ ಘೋಷಣೆ

ರಾಜ್ಯ

ಗೋಬಿ ಮಂಚೂರಿಯಲ್ಲಿ Sunset Yellow ಮತ್ತು Tartrazine ಅಂಶ ಇರುವುದು ಪತ್ತೆ

ಆರೋಗ್ಯ ಇಲಾಖೆಯಿಂದ ಈಗಾಗಲೇ ಹಾನಿಕಾರ ಅಂಶವಿರುವಂತ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯ ಸ್ಯಾಂಪಲ್ ಸಂಗ್ರಹಿಸಿ, ಪರೀಕ್ಷೆಗೆ ಒಳಪಡಿಸಿ, ಪರೀಕ್ಷಾ ವರದಿಯನ್ನು ಪಡೆದುಕೊಂಡಿದೆ. ಈ ವರದಿಯನ್ನು ಆಧರಿಸಿ ಕರ್ನಾಟಕದಲ್ಲಿ ಬಾಂಬೆ ಮಿಠಾಯಿ ಹಾಗೂ ಗೋಬಿ ಮಂಚೂರು ನಿಷೇದ ಮಾಡೋದಾಗಿ ಹೇಳಲಾಗುತ್ತಿದೆ.

ಆಹಾರ ಮತ್ತು ಸುರಕ್ಷತಾ ಇಲಾಖೆಯಿಂದ ರಿಪೋರ್ಟ್ ಆಧರಿಸಿ ಮಾರ್ಚ್ 11ರ ಸೋಮವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸ್ಯಾಂಪಲ್‌ನಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿದೆ. ಕಾಟನ್ ಕ್ಯಾಂಡಿಯಲ್ಲಿ ಹಾನಿಕಾರಕ ಅಂಶ ಇರುವುದು ಪತ್ತೆಯಾಗಿದ್ದು, ಗೋಬಿ ಮಂಚೂರಿಯಲ್ಲಿ Sunset Yellow ಮತ್ತು Tartrazine ಅಂಶ ಇರುವುದು ಪತ್ತೆಯಾಗಿದೆ. ರಾಸಾಯನಿಕ ಕಲಬೆರಕೆ ಇರುವುದರಿಂದ ಕಾಟನ್ ಕ್ಯಾಂಡಿ ಬ್ಯಾನ್ ಮಾಡುವ ಸಾಧ್ಯತೆದೆಯ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.