ಪೌರತ್ವ ಕಾಯ್ದೆಯನ್ನು ಜಾರಿಗೊಳಿಸಿದ ಕೇಂದ್ರ ಸರ್ಕಾರ

ರಾಷ್ಟ್ರೀಯ

ಪೌರತ್ವ ಕಾಯ್ದೆ (CAA)ಯನ್ನು‌ ಕೇಂದ್ರ ಸರ್ಕಾರ ಜಾರಿಗೊಳಿಸಿದೆ.
ಜಾರಿ ಸಂಬಂಧ ಕೇಂದ್ರ ಸರ್ಕಾರ ಸೋಮವಾರ ಸಂಜೆ ಅಧಿಸೂಚನೆ ಪ್ರಕಟಿಸಿದೆ. ಈ ಹಿಂದೆ ನೀಡಿದ್ದ ಭರವಸೆಯಂತೆ ಚುನಾವಣೆಗೂ‌ ಮುನ್ನ ಸಿಎಎ ಜಾರಿ ಸಂಬಂಧ ಅಧಿಸೂಚನೆ ಹೊರಡಿಸಿದೆ.

ಕೇಂದ್ರ ಗೃಹಸಚಿವ ಅಮಿತ್ ಶಾ ಈ ಹಿಂದೆ ಲೋಕಸಭೆ ಚುನಾವಣೆಗೂ ಮುನ್ನ ಸಿಎಎಯನ್ನು ಜಾರಿಗೆ ತರುತ್ತೇವೆ ಎಂದು ಹೇಳಿದ್ದರು. ಕಾಯ್ದೆಯಿಂದ ಯಾರಿಗೂ ತೊಂದರೆ ಇಲ್ಲ, ಅದರಲ್ಲೂ ಅಲ್ಪಸಂಖ್ಯಾತರಿಗೆ ಯಾವ ಸಮಸ್ಯೆಯೂ ಆಗುವುದಿಲ್ಲ. ಈ ಕಾಯ್ದೆ ಪೌರತ್ವ ನೀಡುವುದೇ ಹೊರತು ಕಿತ್ತುಕೊಳ್ಳುವುದಲ್ಲ. ರಾಜಕೀಯ ಲಾಭಕ್ಕಾಗಿ ವಿರೋಧ ಪಕ್ಷಗಳು ಸುಳ್ಳು ಪ್ರಚಾರ ಮಾಡುತ್ತಿವೆ. ಮುಸ್ಲಿಂ ಸಹೋದರರ ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದರು.

ಸಿಎಎ ಜಾರಿಯಿಂದ 2014ರ ಡಿಸೆಂಬರ್ 31 ಕ್ಕೂ‌ ಮೊದಲು ಬಾಂಗ್ಲಾ, ಅಫ್ಘಾನಿಸ್ತಾನ ಹಾಗೂ‌ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ನಿರಾಶ್ರಿತರಿಗೆ ಪೌರತ್ವ ದೊರೆಯಲಿದೆ. ಕೇಂದ್ರ ಸರ್ಕಾರ ಭಾರತದದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ದೇಶಾದ್ಯಂತ ಸಿಎಎ ಪೌರತ್ವ ಕಾಯ್ದೆಯ ನಿಯಮಗಳ ಅಧಿಸೂಚನೆ ಹೊರಬಿದ್ದಿದೆ. 2019ರಲ್ಲಿ ಸಂಸತ್ತಿನಲ್ಲಿ ಸಿಎಎ ಕಾಯ್ದೆಗೆ ಅನುಮೋದನೆ ಸಿಕ್ಕರೂ, ಅಧಿಸೂಚನೆ ಹೊರಡಿಸಿರಲಿಲ್ಲ. ಪ್ರತಿಭಟನೆ, ವಿರೋಧಗಳಿಂದ ವಿಳಂಬವಾಗಿತ್ತು. ಇತ್ತೀಚೆಗೆ ಲೋಕಸಭಾ ಚುನಾವಣೆಗೆ ಮುನ್ನ ಸಿಎಎ ಜಾರಿಗೊಳಿಸುವುದಾಗಿ ಅಮಿತ್ ಶಾ ಪುನರುಚ್ಚರಿಸಿದ್ದರು. ಇದರಂತೆ ಸಿಎಎ ನಿಮಯಗಳ ಅಧಿಸೂಚನೆ ಹೊರಡಿಸಲಾಗಿದೆ.