ಕರಾವಳಿ ಭಾಗದಲ್ಲಿ ಹೊಸ ಪ್ರಯೋಗಕ್ಕೆ ಪರಿವಾರ ಚಿಂತನೆ.!ಹೊಸ ಅಭ್ಯರ್ಥಿಗಳ ಹುಡುಕಾಟದಲ್ಲಿ ಬಿಜೆಪಿ

ಕರಾವಳಿ

2024ರ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ರಾಜಕೀಯ ಪಕ್ಷಗಳು ತಲೆಕೆಡೆಸಿಕೊಂಡಿದೆ. ಕಾಂಗ್ರೆಸ್ ರಾಜ್ಯದ ಮೊದಲ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದ್ದರೂ, ಬಿಜೆಪಿ ಬುಧವಾರ ಅಥವಾ ಗುರುವಾರ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಕುತೂಹಲ ಕೆರಳಿಸಿರುವ ಕ್ಷೇತ್ರಗಳಲ್ಲಿ ಉಡುಪಿ – ಚಿಕ್ಕಮಗಳೂರು ಮತ್ತು ಮಂಗಳೂರು. ಶೋಭಾ ಕರಂದ್ಲಾಜೆ ಅವರು ಕ್ಷೇತ್ರದಲ್ಲಿ ಮತ್ತೊಮ್ಮೆ ಸ್ಪರ್ಧಿಸಲು ಸಿದ್ದತೆ ನಡೆಸುತ್ತಿದ್ದರೆ, ಗೋ ಬ್ಯಾಕ್ ಅಭಿಯಾನದಿಂದ ವಿಚಲಿತರಾದಂತೆ ಕಾಣುತ್ತಿದೆ. ಸತತ ಎರಡು ಬಾರಿ ಆಯ್ಕೆಯಾಗಿರುವ ಅವರಿಗೆ ಸದ್ಯ ವಿರೋಧದ ಬಿಸಿಯೂ ಕಾಡುತ್ತಿದೆ. ಗೋ ಬ್ಯಾಕ್ ಶೋಭಾ ಅಭಿಯಾನ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಕಾಂಗ್ರೆಸ್ ನಿಂದ ಪಕ್ಷಾಂತರಗೊಂಡು ಬಿಜೆಪಿಗೆ ಬಂದಿರುವ ಪ್ರಮೋದ್ ಮಧ್ವರಾಜ್ ಕೂಡಾ ಟಿಕೆಟ್ ಗಾಗಿ ಕಸರತ್ತು ನಡೆಸುತ್ತಿದ್ದಾರೆ.

ಸದ್ಯದ ವರದಿಯ ಪ್ರಕಾರ ಅಚ್ಚರಿಯ ಅಭ್ಯರ್ಥಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಲಿದೆ ಎನ್ನಲಾಗಿದೆ. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಹೆಚ್ಚಿದೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡಿದೆ. 4 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆ ಆಗುವುದು ಖಚಿತ ಎನ್ನಲಾಗಿದೆ. ಈ ಮಧ್ಯೆ, ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಉತ್ತರ-ಶೋಭಾ ಕರಂದ್ಲಾಜೆ. ದಕ್ಷಿಣ ಕನ್ನಡ-ಬೃಜೇಶ್‌ ಚೌಟ ಅಥವಾ ಮಂಗಳೂರು ಉತ್ತರದ ಶಾಸಕ ಭರತ್‌ ಶೆಟ್ಟಿ ಸಾಧ್ಯತೆ ಎನ್ನಲಾಗಿದೆ. ಈ ಭಾರಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ಗೆ ಸ್ಪರ್ಧೆಯ ಅವಕಾಶ ಕಡಿಮೆ ಎಂಬ ಮಾತು ಕೇಳಿ ಬರುತ್ತಿದೆ. ಉಡುಪಿ- ಚಿಕ್ಕಮಗಳೂರು, ಕೋಟ ಶ್ರೀನಿವಾಸ ಪೂಜಾರಿ. ಬಿಲ್ಲವರು ಹಾಗೂ ನಾಮಧಾರಿ ಸಮುದಾಯದ ಆಕ್ರೋಶ ಶಮನ ಮಾಡುವುದಕ್ಕಾಗಿ ವರಿಷ್ಠರ ತಂತ್ರ. ಉತ್ತರ ಕನ್ನಡ- ಇನ್ನೂ ನಿರ್ಧಾರವಾಗಿಲ್ಲ. ಪ್ರಧಾನಿ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ ಕ್ಷೇತ್ರದ ವಿಷಯ ಚರ್ಚೆ ನಡೆಸಲಾಗಿಲ್ಲ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ.