ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಬೋಳ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ, ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ರಾಜೇಂದ್ರ ಆಚಾರ್ ಬಂಧನ

ರಾಜ್ಯ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ನೀಡುತ್ತಿದ್ದ ಆರೋಪದಡಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರೊಬ್ಬರನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಬೋಳ ವಂಜಾರಕಟ್ಟೆ ನಿವಾಸಿ ಬರಬೈಲ್ ಶಾಲೆಯ ಮುಖ್ಯ ಶಿಕ್ಷಕ ಹಾಗೂ ಪಂಜಾರಕಟ್ಟೆ ಇಚ್ಚೋಡಿ ಶ್ರೀ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ರಾಜೇಂದ್ರ ಆಚಾರ್ ಬಂಧಿತ ಆರೋಪಿ.

ರಾಜೇಂದ್ರ ಆಚಾರ್ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ಅನೇಕ ದೂರುಗಳಿದ್ದು, ಊರವರು ಬುದ್ಧಿ ಹೇಳಿದ್ದರು. ಆದರೂ ಈತನ ಹಳೆ ಚಾಳಿ ಮುಂದುವರಿಸಿದ ಪರಿಣಾಮ ಉಡುಪಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಆಗಮಿಸಿ ಸಮಗ್ರ ತನಿಖೆ ನಡೆಸಿದ್ದರು. ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದ ಅಪ್ರಾಪ್ತ ವಯಸ್ಸಿನ ಒಟ್ಟು 14 ವಿದ್ಯಾರ್ಥಿನಿಯರಿಂದ ದೂರು ಪಡೆದುಕೊಂಡಿದ್ದು, ಈ ಬಗ್ಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ ಬಳಿಕವೇ ಈ ಕ್ರಮ ಕೈಗೊಂಡಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮುಖ್ಯ ಶಿಕ್ಷಕ ರಾಜೇಂದ್ರ ಆಚಾರ್ ತನ್ನ ಸೇವಾವಧಿಯನ್ನು ನಾನಾ ಶಾಲೆಗಳಲ್ಲಿ ಪೂರೈಸಿದ್ದಾರೆ. ಪ್ರಸ್ತುತ ವರ್ಗಾವಣೆಗೊಂಡು ಬರೆಬೈಲ್ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಾನು ಕರ್ತವ್ಯ ನಿರ್ವಹಿಸಿದ ಎಲ್ಲಾ ಶಾಲೆಗಳಲ್ಲೂ ಈತನ ವಿರುದ್ಧ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ನೀಡುತ್ತಿದ್ದ ಆರೋಪಗಳಿದ್ದವು. ಇದೀಗ ಈತನ ಚಾಳಿಯಿಂದ ಮುದ್ದೆ ಮುರಿಯುವಂತಾಗಿದೆ.