ಪಣಜಿ: ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘೋರ ಘಟನೆ ಗೋವಾದ ವಾಸ್ಕೋ ಎಂಬಲ್ಲಿ ನಡೆದಿದೆ. ಕಟ್ಟಡ ನಿರ್ಮಾಣ ಸ್ಥಳದಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಬಾಲಕಿಯ ಪೋಷಕರು ಆಕೆ ಸುಮಾರು ಹೊತ್ತಿನಿಂದ ಕಾಣಿಸದೇ ಇದ್ದುದರಿಂದ ಹುಡುಕಾಟ ನಡೆಸಿದ್ದಾರೆ. ಅ ವೇಳೆ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಿರ್ಮಾಣ ಸ್ಥಳದ ಸುಮಾರು 20 ಕಾರ್ಮಿಕರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ.
ತಕ್ಷಣ ಪೋಷಕರು ಬಾಲಕಿಯನ್ನು ಚಿಕಾಲಿಮ್ ಉಪ-ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ವೈದ್ಯರು ಬಾಲಕಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಬಾಲಕಿಯ ತಾಯಿ ನನ್ನ ಮಗಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರಬಹುದು ಎಂದು ಆರೋಪಿಸಿದ ಬಳಿಕ ವಾಸ್ಕೋ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಯಲ್ಲಿ ಸಂತ್ರಸ್ತೆಯ ಮೇಲೆ ಮೊದಲು ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಕತ್ತು ಹಿಸುಕಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ದಕ್ಷಿಣ ಗೋವಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.
ನಿರ್ಮಾಣ ಸ್ಥಳದಲ್ಲಿ ಕೆಲಸ ಮಾಡುತ್ತಿರುವ 15 ರಿಂದ 20 ಕಾರ್ಮಿಕರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಯುತ್ತಿದ್ದಾರೆ. ಲೈಂಗಿಕ ದೌರ್ಜನ್ಯ ಮತ್ತು ಹತ್ಯೆ, ಪೋಕ್ಸೋ ಕಾಯ್ದೆಯಡಿಯೂ ಪ್ರಕರಣ ದಾಖಲಿಸಿ ವಿಚಾರಣೆ ನಡೆಯುತ್ತಿದೆ.
