‘ನಿಗಮ–ಮಂಡಳಿಗಳಿಗೆ ನೂತನ ಅಧ್ಯಕ್ಷರು, ಸದಸ್ಯರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ಅಕ್ಟೋಬರ್‌ನಲ್ಲೇ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ’ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದರು.
ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ಶಾಸಕರು, ಪಕ್ಷಕ್ಕಾಗಿ ದುಡಿದ ಮುಖಂಡರು, ಕಾರ್ಯಕರ್ತರನ್ನು ಅಧ್ಯಕ್ಷರು ಹಾಗೂ ವಿವಿಧ ನಿಗಮಗಳ ನಿರ್ದೇಶಕ ಸ್ಥಾನಗಳಿಗೆ ಪರಿಗಣಿಸಲಾಗುವುದು. ಅರ್ಹತೆಯ ಆಧಾರದಲ್ಲಿ ಸೂಕ್ತ ಅವಕಾಶ ನೀಡಲಾಗುವುದು. ಈಗಾಗಲೇ ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಅವರೂ ಸಮ್ಮತಿ ನೀಡಿದ್ದಾರೆ’ ಎಂದರು.
