ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥರಾದ ಮೋಹನ್ ಭಾಗವತ್ ರವರು ಮಣಿಪುರ ಸಂಘರ್ಷವನ್ನು ಆದ್ಯತೆಯ ಮೇಲೆ ಪರಿಹರಿಸಬೇಕು ಎಂದು ಹೇಳಿದ್ದಾರೆ.
ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೋಹನ್ ಭಗವತ್ ರವರು ಮಣಿಪುರ ಶಾಂತಿಗಾಗಿ ಕಾಯುತ್ತಾ ಒಂದು ವರ್ಷವಾಗಿದೆ, ಕಳೆದ 10 ವರ್ಷಗಳಿಂದ ರಾಜ್ಯವು ಶಾಂತಿಯುತವಾಗಿತ್ತು, ಆದರೆ ಇದ್ದಕ್ಕಿದ್ದಂತೆ ರಾಜ್ಯದಲ್ಲಿ ಮತ್ತೆ ಬಂದೂಕು ಸಂಸ್ಕೃತಿ ಹೆಚ್ಚಾಗಿದೆ, ಇದು ಮುಖ್ಯವಾಗಿದ್ದು ಆದ್ಯತೆಯ ಮೇಲೆ ಇಲ್ಲಿನ ಸಂಘರ್ಷವನ್ನು ಪರಿಹರಿಸಿ ಎಂದು ಆಗ್ರಹಿಸಿದ್ದಾರೆ.
2024 ರ ಲೋಕಸಭಾ ಚುನಾವಣೆಯ ನಂತರದ ತಮ್ಮ ಮೊದಲ ಹೇಳಿಕೆಯಲ್ಲಿ, ಚುನಾವಣೆಯು ಒಮ್ಮತವನ್ನು ನಿರ್ಮಿಸುವ ಪ್ರಕ್ರಿಯೆಯಾಗಿದೆ. ಸಂಸತ್ತಿಗೆ ಎರಡು ಬದಿಗಳಿವೆ ಆದ್ದರಿಂದ ಯಾವುದೇ ಪ್ರಶ್ನೆಯ ಎರಡೂ ಅಂಶಗಳನ್ನು ಪ್ರಸ್ತುತಪಡಿಸಬಹುದು. ಎಂದು ಅವರು ಹೇಳಿದರು.
ಜಗತ್ತಿನಾದ್ಯಂತ ಸಮಾಜವು ಬದಲಾಗಿದೆ, ಇದು ವ್ಯವಸ್ಥಿತ ಬದಲಾವಣೆಗೆ ಕಾರಣವಾಗಿದೆ. ಅದು ಪ್ರಜಾಪ್ರಭುತ್ವದ ಮೂಲತತ್ವವಾಗಿದೆ. ಚುನಾವಣಾ ಪ್ರಚಾರದ ವೇಳೆ ಜನರು ಪರಸ್ಪರ ನಿಂದನೆ, ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಳ್ಳುವ, ಸುಳ್ಳು ಸುದ್ದಿಗಳನ್ನು ಹರಡುವ ರೀತಿ ಸರಿಯಲ್ಲ. ನಾವು ಚುನಾವಣಾ ಉನ್ಮಾದವನ್ನು ತೊಡೆದುಹಾಕಬೇಕು ಮತ್ತು ದೇಶವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಯೋಚಿಸಬೇಕು ಎಂದು ಮೋಹನ್ ಭಾಗವತ್ ಮನವಿ ಮಾಡಿದ್ದಾರೆ.
