ನಟ ದರ್ಶನ್ ಮತ್ತು ಸಹಚರರಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸರ ಮನವಿ ಮೇರೆಗೆ ಆರೋಪಿಗಳನ್ನು 6 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಹೊರಡಿಸಿದೆ. ದರ್ಶನ್ ಹಾಗೂ ಸಹಚರರನ್ನು 14 ದಿನ ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ರೇಣುಕಾಸ್ವಾಮಿಯ ಹತ್ಯೆ, ಅಪಹರಣ ಮಾಡಿ ಕರೆದುಕೊಂಡು ಹೋಗಿದ್ದು,. ಕೊಲೆಯಾದ ಸ್ಥಳ, ಶವ ಎಸೆದ ಜಾಗದಲ್ಲಿ ಮಹಜರು ನಡೆಸಬೇಕಿದೆ. ಮೊಬೈಲ್ ಡೇಟಾ ಸಂಗ್ರಹಿಸಬೇಕು. ಆಯುಧ ಜಪ್ತಿ ಮಾಡಬೇಕಿದೆ. ದರ್ಶನ್ ಸೆಲೆಬ್ರಿಟಿ ಆಗಿರುವುದರಿಂದ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದ್ದು, ಅವರನ್ನು 14 ದಿನ ಕಸ್ಟಡಿಗೆ ನೀಡಬೇಕೆಂದು ಪೊಲೀಸರು ಮನವಿ ಮಾಡಿದ್ದರು.
