ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರದಲ್ಲಿ ಮಳೆಗೆ ಮನೆ ಕುಸಿದು ಬಿದ್ದು ಒಂದೇ ಕುಟುಂದ ನಾಲ್ವರು ಮೃತಪಟ್ಟ ಘಟನೆ ನಡೆದಿದೆ.
ಮೃತ ಪಟ್ಟವರನ್ನು ಯಾಸಿರ್ (45), ಅವರ ಪತ್ನಿ ಮರಿಯಮ್ಮ(40) ಹಾಗೂ ಅವರ ಮಕ್ಕಳಾದ ರಿಯಾನ, ರಿಫಾನ ಎಂದು ಗುರುತಿಸಲಾಗಿದೆ.
ಘಟನೆಯ ಮಾಹಿತಿ ತಿಳಿದ ಸ್ಥಳೀಯರು ಮೂವರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬಾಲಕಿ ಮೃತದೇಹಕ್ಕಾಗಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.
