ನಕಲಿ ವೈದ್ಯರ ಹಾವಳಿ ತಡೆಗೆ ರಾಜ್ಯ ಸರ್ಕಾರದ ಮಹತ್ವದ ಕ್ರಮ; 25 ಲಕ್ಷದವರೆಗೆ ದಂಡ, 3 ವರ್ಷ ಶಿಕ್ಷೆ.

ರಾಜ್ಯ

ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ನಕಲಿ ವೈದ್ಯರೆಂದು ಕಂಡುಬಂದರೆ ರೂಪಾಯಿ 25 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ವಿಧಾನ ಮಂಡಲ ಕಲಾಪದಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ದಿನೇಶ್‌ ಗುಂಡೂರಾವ್‌, ರಾಜ್ಯದಲ್ಲಿ ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಕನಿಷ್ಠ 3 ವರ್ಷ ಜೈಲು ಶಿಕ್ಷೆಯಾಗುವಂತೆ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುತ್ತಿದೆ. ನಕಲಿ ವೈದ್ಯರ ಹಾವಳಿ ತಡೆಗೆ ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಹಾಕುವುದು ಕಡ್ಡಾಯಗೊಳಿಸಲಾಗಿದೆ. ನಕಲಿ ವೈದ್ಯರೆಂದು ಕಂಡುಬಂದರೆ ರೂಪಾಯಿ 25 ಲಕ್ಷದವರೆಗೆ ದಂಡ ವಿಧಿಸಲಾಗುವುದು” ಎಂದು ತಿಳಿಸಿದ್ದಾರೆ.