ಜ್ವರದಿಂದ ಬಳಲುತ್ತಿದ್ದ ನೇರಳಕಟ್ಟೆಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತ್ಯು

ಕರಾವಳಿ

ವಿಟ್ಲ: ಜ್ವರದಿಂದ ಬಳಲುತ್ತಿದ್ದ ನೇರಳಕಟ್ಟೆಯ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕ್ಯಾನಿಕ್ ವೃತ್ತಿಯ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ(22) ಮೃತಪಟ್ಟವರು.

ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೆನ್ ಆಗಿ ಕೆಲಸ ಮಾಡುತ್ತಿದ್ದ ಬಾತಿಷಾಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಬೆಳಿಗ್ಗೆ ಮತ್ತೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.