ಶಿಕ್ಷಕನೊಬ್ಬನ ಮೊಬೈಲ್ ನಲ್ಲಿ 5,000 ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಹೆಚ್ಚು ನಗ್ನ ದೃಶ್ಯಗಳು ಪತ್ತೆ; FIR ರದ್ದತಿಗೆ ಹೈಕೋರ್ಟ್ ನಿರಾಕರಣೆ

ರಾಜ್ಯ

ಶಾಲಾ ಶಿಕ್ಷಕನೊಬ್ಬನ ಮೊಬೈಲ್ ನಲ್ಲಿ ವಿದ್ಯಾರ್ಥಿನಿಯರ 5,000 ಹೆಚ್ಚು ನಗ್ನ ದೃಶ್ಯಗಳು ಪತ್ತೆಯಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಆತನ ವಿರುದ್ಧ ದಾಖಲಾದ ಎಫ್ ಐ ಆರ್ ರದ್ದತಿಗೆ ಹೈಕೋರ್ಟ್ ನಿರಾಕರಿಸಿದೆ.
ಕೋಲಾರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರಲ್ಲಿ ಚಿತ್ರಕಲಾ ಶಿಕ್ಷಕ ಬಾಲಕಿಯರು ಬಟ್ಟೆ ಬದಲಿಸುವ ಸಮಯದ 5,000ಕ್ಕೂ ಹೆಚ್ಚು ಫೋಟೋ ಹಾಗೂ ನೂರಾರು ವಿಡಿಯೋ ಸೆರೆಹಿಡಿದ ಆರೋಪವಿತ್ತು. ಪೋಕ್ಸೋ ಕಾಯ್ದೆಯಡಿಯಲ್ಲಿ ಚಿತ್ರಕಲಾ ಶಿಕ್ಷಕನೊಬ್ಬನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ವಸತಿ ಶಾಲೆಯ ಚಿತ್ರಕಲಾ ಶಿಕ್ಷಕ ಮುನಿಯಪ್ಪ ಎಂಬವರ ವಿರುದ ಮಾಸ್ತಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು,ಆರೋಪಿ ಬಳಿ 5 ಮೊಬೈಲ್, ಸಾವಿರಾರು ವಿಡಿಯೋಗಳು ಪತ್ತೆಯಾಗಿತ್ತು. ಪ್ರಕರಣ ರದ್ದು ಮಾಡುವಂತೆ ಕೋರಿ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಚಿತ್ರ ಕಲಾ ಶಿಕ್ಷಕನ ಅರ್ಜಿಯನ್ನು ಮಾನ್ಯ ನ್ಯಾಯಾಲಯ ವಜಾಗೊಳಿಸಿದೆ.

ಶಿಕ್ಷಕನ ಕೃತ್ಯವು ನಿಜಕ್ಕೂ ಅಸಭ್ಯ ಹಾಗೂ ಭಯಾನಕವಾಗಿದೆ. ಇಂತಹ ಪ್ರಕರಣವನ್ನು ರದ್ದುಪಡಿಸಲಾಗದು ಎಂದಿದೆ. ಫೋಟೋ ಕಾಯ್ದೆ ಸೆಕ್ಷನ್ 11 ಪ್ರಕಾರ, ಮಕ್ಕಳ ದೇಹ ಅಥವಾ ದೇಹದ ಯಾವುದೇ ಭಾಗವನ್ನು ಆಸಭ್ಯ ರೀತಿಯಲ್ಲಿ ಪ್ರದರ್ಶಿಸುವುದು ಲೈಂಗಿಕ ಕಿರುಕುಳವಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.