ರಾಜಧಾನಿ ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಹಿಟ್ ಆ್ಯಂಡ್ ರನ್ ಗೆ ಮೂವರು ವಿದ್ಯಾರ್ಥಿಗಳು ಬಲಿಯಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರ ತಾಲೂಕಿನ ಚಿಕ್ಕಜಾಲ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಗಳನ್ನು ರೋಹಿತ್ (22), ಸುಚಿತ್ (22) ಹಾಗೂ ಹರ್ಷ (22) ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ವಾಹನ ಚಾಲಕ ಪರಾರಿಯಾಗಿದ್ದಾನೆ. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
