‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ : ಕೃತಿ ಆಹ್ವಾನ

ಕರಾವಳಿ

ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಮುಸ್ಲಿಮ್ ಬರಹಗಾರರ ಉತ್ತಮ ಕನ್ನಡ ಕೃತಿಗೆ ನೀಡುವ ರಾಜ್ಯ ಮಟ್ಟದ ‘ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿಯು ₹. 10 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.

ಆಸಕ್ತ ಮುಸ್ಲಿಮ್ ಬರಹಗಾರರು, 2023ನೇ ಸಾಲಿನಲ್ಲಿ ಪ್ರಕಟವಾದ ತಮ್ಮ ಕನ್ನಡ ಕೃತಿಯ ನಾಲ್ಕು ಪ್ರತಿಗಳನ್ನು ಸೆಪ್ಟೆಂಬರ್ 20ರ ಒಳಗಾಗಿ ಸಂಚಾಲಕರು, ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ, ಮುಸ್ಲಿಮ್ ಲೇಖಕರ ಸಂಘ, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು – 575001 (ಮೊ: 9845054191) ಈ ವಿಳಾಸಕ್ಕೆ ಕಳುಹಿಸಬಹುದು.

ಅನುವಾದಿತ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ ಎಂದು ಸಂಘದ ಅಧ್ಯಕ್ಷ ಉಮರ್ ಯು. ಎಚ್. ತಿಳಿಸಿದ್ದಾರೆ