ಬಜರಂಗದಳದ ಮುಖಂಡ ಪುನೀತ್ ಅತ್ತಾವರನನ್ನು ಮಂಡ್ಯದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಂಡವಪುರದ RSS ಕಾರ್ಯಲಯಕ್ಕೆ ಆಗಮಿಸುವಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಈ ನಡುವೆ ಬಂಟ್ವಾಳದಲ್ಲಿ ವಿಹಿಂಪ ಮುಖಂಡ ಶರಣ್ ಪಂಪ್ ವೆಲ್ ನೀಡಿರುವ ಹೇಳಿಕೆಗೆ ವ್ಯಕ್ತಿಯೋರ್ವ ಆಡಿಯೋ ರಿಲೀಸ್ ಮಾಡಿದ್ದು ತಾಕತ್ತಿದ್ದರೆ ಸೋಮವಾರದ ಈದ್ ಮಿಲಾದ್ ಮೆರವಣಿಗೆ ತಡೆಯಿರಿ ಎಂದು ಸವಾಲೋಡಿದ್ದರು. ಈ ಸವಾಲು ಸ್ವೀಕರಿಸಿದ ಪುನೀತ್ ಅತ್ತಾವರ ಬಿ.ಸಿ ರೋಡ್ ಚಲೋ ಮಾಡುವುದಾಗಿ ಘೋಷಿಸಿದ್ದರು. ಈ ನಡುವೆ ಮಧ್ಯರಾತ್ರಿ ಪೊಲೀಸರು ಪುನೀತ್ ಅತ್ತಾವರರನ್ನು ಮಂಡ್ಯದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶರಣ್ ಪಂಪ್ ವೆಲ್ ನೀಡಿರುವ ಹೇಳಿಕೆಗೆ ಸವಾಲೆಸೆದ ಬಂಟ್ವಾಳದ ಓರ್ವ ಕಾಂಗ್ರೇಸ್ ಮುಖಂಡ, ಬಂಟ್ವಾಳ ಪುರಸಭೆ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಎಂಬವರನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದ್ದು, ಆಡಿಯೋ ಬಿಡುಗಡೆ ಮಾಡಿದ ಹಸೈನಾರ್ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಬಿಡುಗಡೆಯಾಗಬೇಕಾಗಿದೆ. ಕೋಮು ಗಲಾಬೆ ಎಬ್ಬಿಸುವ ಯತ್ನ ನಡೆಯುತ್ತಿದೆ ಎಂಬ ಗುಪ್ತಚಾರ ಇಲಾಖೆಯ ಮಾಹಿತಿ ಮೆರೆಗೆ ಪೊಲೀಸರು ಇತ್ತಂಡಗಳಿಂದಲೂ ವಶಕ್ಕೆ ಪಡೆಯುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಕಾರಿ ಸಂದೇಶ ರವಾನಿಸುವವರ ಮೇಲೆ ಪೊಲೀಸರು ನಿಗಾ ಇಟ್ಟಿರುತ್ತಾರೆ.
