ಸುಳ್ಯ: ವಸತಿ ನಿಲಯದಿಂದ ಶಾಲೆಗೆ ಹೋಗುತ್ತಿದ್ದ ಬಾಲಕನೋರ್ವನ ಮರ್ಮಾಂಗವನ್ನು ಇಬ್ಬರು ವಿದ್ಯಾರ್ಥಿಗಳು ಹಿಡಿದೆಳೆದ ಪರಿಣಾಮವಾಗಿ ಮರ್ಮಾಂಗ ಊದಿಕೊಂಡು ಬಾಲಕ ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ.

ಸೆ. 14ರಂದು ರಾತ್ರಿ ವಸತಿ ನಿಲಯದಲ್ಲಿ ಇಬ್ಬರು ಸಹಪಾಠಿ ವಿದ್ಯಾರ್ಥಿಗಳು ಬಾಲಕನ ಮರ್ಮಾಂಗವನ್ನು ಹಿಡಿದೆಳೆದಿದ್ದರು. ಆ ಬಳಿಕ ಬಾಲಕ ಮೂತ್ರ ವಿಸರ್ಜನೆ ಮಾಡುವ ವೇಳೆ ನೋವಾಗುತ್ತಿದ್ದ ಪರಿಣಾಮ ಮನೆಗೆ ಬಂದಿದ್ ದಎನ್ನಲಾಗಿದೆ. ಆಬಳಿಕ ತಾಯಿಗೆ ವಿಷಯ ತಿಳಿಸಿದ ಬಳಿಕ ಬಾಲಕನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಈಗ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು ಚೇತರಿಸಿಕೊಳ್ಳುತ್ತಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
