ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಪ್ರವೇಶ ಪಡೆದಿದ್ದು ಬರೇ ಎರಡು ಅಭ್ಯರ್ಥಿಗಳು.!

ರಾಜ್ಯ

ಬಿಜೆಪಿ ಸರಕಾರ ಆರಂಭಿಸಿದ್ದ ಕನ್ನಡ ಮಾಧ್ಯಮ ಇಂಜಿನಿಯರಿಂಗ್ ಶಿಕ್ಷಣ ಪ್ಲಾಪ್ ಶೋ.!

ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣ ಆರಂಭಿಸಿರುವ ರಾಜ್ಯ ಸರಕಾರಕ್ಕೆ ಹಿನ್ನಡೆಯಾಗಿದೆ. ಈ ವರ್ಷದಲ್ಲಿ ಕನ್ನಡ ಮಾಧ್ಯಮದ ಇಂಜಿನಿಯರಿಂಗ್ ವಿಷಯಕ್ಕೆ ಪ್ರವೇಶ ಪಡೆದಿದ್ದರೂ ಅವರು ಇನ್ನೂ ಶುಲ್ಕ ಪಾವತಿಸಿಲ್ಲ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಗಳ ಪ್ರಕಾರ ಟಿ.ಎಸ್ ಸಾಗರ್ ಮೈಸೂರಿನ ಮಹಾರಾಜ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿ ಚಿಕ್ಕಾಬಳ್ಳಾಪುರದ ಎಸ್ ಜೆಸಿ ಕಾಲೇಜಿನಲ್ಲಿ ಸೀಟನ್ನು ಪಡೆದುಕೊಂಡಿದ್ದಾರೆ. ಆದರೆ ಇಬ್ಬರು ಇನ್ನೂ ಶುಲ್ಕವನ್ನು ಪಾವತಿಸಿಲ್ಲ ಮತ್ತು ತರಗತಿಗೆ ಹಾಜರಾಗಿಲ್ಲ. ಸಾಗರ್ ಮೆಕ್ಯಾನಿಕಲ್ ವಿಭಾಗವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇವರು ಕನ್ನಡ ಮಾಧ್ಯಮದಲ್ಲೇ ಇಂಜಿನಿಯರಿಂಗ್ ಶಿಕ್ಷಣ ಮುಗಿಸುತ್ತಾರೆಯೇ ಅನ್ನುವ ಅನುಮಾನ ರಾಜ್ಯ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳನ್ನು ಕಾಡುತ್ತಿದೆ.

2021-22 ರಲ್ಲಿ ಅಂದಿನ ಬಿಜೆಪಿ ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಂಡಿತ್ತು. ಇದರ ಅಂಗವಾಗಿ ಮೆಕ್ಯಾನಿಕಲ್ ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಕನ್ನಡ ಮಾಧ್ಯಮವನ್ನು ರಾಜ್ಯದ 5 ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಆರಂಭಿಸಿತ್ತು. ಅಂದಿನಿಂದಲೂ ಕೆಲವು ವಿದ್ಯಾರ್ಥಿಗಳು ಕನ್ನಡ ಮಾಧ್ಯಮಕ್ಕೆ ಅರ್ಜಿಯನ್ನು ಸಲ್ಲಿಸುತ್ತಾರೆ. ಪ್ರವೇಶವನ್ನು ಪಡೆದು ಕೊನೆಗೆ ಇಂಗ್ಲಿಷ್ ಮಾಧ್ಯಮಕ್ಕೆ ವರ್ಗಾವಣೆ ಬಯಸುತ್ತಾರೆ. ಇದು ಆರಂಭದಿಂದಲೂ ನಡೆದುಕೊಂಡು ಬಂದಿದೆ. ಈ ವರ್ಷ ಕೂಡ ಕನ್ನಡ ಮಾಧ್ಯಮ ಇಂಜಿನಿಯರಿಂಗ್ ಪ್ರವೇಶಕ್ಕೆ ವಿದ್ಯಾರ್ಥಿಗಳ ಪ್ರವೇಶ ಉತ್ತಮವಾಗಿಲ್ಲ.

ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣ ಆರಂಭಿಸಿದಾಗ ಅಧಿಕಾರಿಗಳು ಭವಿಷ್ಯದ ಬಗ್ಗೆ ಯೋಚನೆ ಮಾಡದೆ ಏಕಾಏಕಿ ರಾಷ್ಟ್ರೀಯ ಶಿಕ್ಷಣ ನೀತಿ ಅಡಿ ಕನ್ನಡ ಮಾಧ್ಯಮ ಆರಂಭಿಸಿದರು. ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಉದ್ಯೋಗದ ಅವಕಾಶ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪ್ರಕಟಿಸದೆ ಕೇವಲ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಮಾತ್ರ ಆರಂಭಿಸಿದರು. ಇದು ಕೂಡ ವಿದ್ಯಾರ್ಥಿಗಳ ನಿರಾಸಕ್ತಿಗೆ ಕಾರಣ. ಅಲ್ಲದೆ ಪಿಯುಸಿಯಲ್ಲಿ ಇಂಗ್ಲೀಷ್ ನಲ್ಲಿ ಕಲಿತ ವಿದ್ಯಾರ್ಥಿಗಳು ಹಠಾತ್ ಇಂಜಿನಿಯರಿಂಗ್ ಶಿಕ್ಷಣವನ್ನು ಕನ್ನಡದಲ್ಲಿ ವ್ಯಾಸಂಗ ಮಾಡುವುದು ಕಷ್ಟವಾಗುತ್ತದೆ. ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದವರು ಕೇವಲ ಕರ್ನಾಟಕದಲ್ಲಿ ಮಾತ್ರ ಕೆಲಸ ಮಾಡಬೇಕಾಗುತ್ತದೆ. ಈ ವಿದ್ಯಾರ್ಥಿಗಳಿಗೆ ವಿದೇಶದ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗ ದೊರೆಯುವುದು ಕಷ್ಟ.