ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಸಾವು. ಪಾಣೆಮಂಗಳೂರು ಸಮೀಪದ ಬೋಳಂಗಡಿಯಲ್ಲಿ ನಡೆದ ದುರ್ಘಟನೆ.

ಕರಾವಳಿ

ಅಡಿಕೆ ಕೊಂಡೊಯ್ಯುತ್ತಿದ್ದ ಕಾರ್ಮಿಕ ಆಕಸ್ಮಿಕವಾಗಿ ಮರದಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ಪಾಣೆಮಂಗಳೂರು ಸಮೀಪದ ಬೋಳಂಗಡಿಯಲ್ಲಿ ನಡೆದಿದೆ. ಬೋಳಂಗಡಿ ಮಜಲು ಮನೆ ನಿವಾಸಿ ಜಾನ್ ಲೋಬೋ(45)ಮೃತ ಕಾರ್ಮಿಕ.

ಬೋಳಂಗಡಿ ಪದ್ಮನಾಭ ಪ್ರಭುಗಳ ತೋಟದಲ್ಲಿ ಅಡಿಕೆ ಕೊಯ್ಯುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಮೃತರ ಪತ್ನಿ ಸ್ವಪ್ನಾ ಅವರ ದೂರಿನಂತೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.