ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ KA-19 Z 7497 ಸಂಖ್ಯೆಯ ಮಾರುತಿ ಸ್ವಿಫ್ಟ್ ಕಾರು ಡಿವೈಡರ್ ಜಂಪ್ ಮಾಡಿದೆ. ಅಪಘಾತದ ತೀವ್ರತೆಗೆ ಕಾರು ಛಿದ್ರಗೊಂಡಿದ್ದು ಓರ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ಕುಂಬ್ರ ನಿವಾಸಿಯೆಂದು ತಿಳಿದು ಬಂದಿದ್ದು ನೆಲ್ಯಾಡಿ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಇನ್ನಷ್ಟೇ ತಿಳಿಯಬೇಕಾಗಿದೆ.
