ಉತ್ತರಪ್ರದೇಶ: ಅಯೋಧ್ಯೆಯಲ್ಲಿ ದಲಿತ ಭದ್ರತಾ ಸಿಬ್ಬಂದಿಯೊಬ್ಬರನ್ನು ಅಪರಿಚಿತ ವ್ಯಕ್ತಿಗಳು ಹೊಡೆದು ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಮೃತನನ್ನು ಧ್ರುವಕುಮಾರ್ ಅಲಿಯಾಸ್ ಬೆಚ್ಚೈ (60) ಎಂದು ಗುರುತಿಸಲಾಗಿದೆ, ಅವರು ನಿರ್ಮಾಣ ಹಂತದಲ್ಲಿರುವ ಕಟ್ಟಡವನ್ನು ಕಾವಲು ಕಾಯುತ್ತಿದ್ದರು.
ಸೋಮವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಕಬ್ಬಿಣದ ರಾಡ್ ಮತ್ತು ದೊಣ್ಣೆಗಳಿಂದ ಕುಮಾರ್ ನನ್ನು ಥಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ..
