2015ರಲ್ಲಿ ಮಂಗಳೂರು ನಗರದ ಅತ್ತಾವರ ಎಂಬಲ್ಲಿ ಕಂಬಕ್ಕೆ ಕಟ್ಟಿ ಹಾಕಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 19 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಮಂಗಳೂರಿನ ಒಂದನೇ1 ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
2015ರ ಆ. 14ರಂದು ಸಂಜೆ ಸಹೋದ್ಯೋಗಿಗೆ ಹಣ ಕೊಡಲು ಅತ್ತಾವರಕ್ಕೆ ಬಂದಿದ್ದ ಕೂಳೂರಿನ ಶಾಕೀರ್ ಎಂಬವರಿಗೆ ಅನ್ಯಮತೀಯ ಎನ್ನುವ ಕಾರಣಕ್ಕೆ ಅವಾಚ್ಯ ಶಬ್ದಗಳಿಂದ ಬೈದು, ಕಾರಿನಿಂದ ಎಳೆದು ಹಾಕಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿತ್ತು.ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆದು 19 ಮಂದಿಯ ಮೇಲೆವಿ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
78 ದಾಖಲೆಗಳನ್ನು ಹಾಗೂ 33 ಸಾಕ್ಷಿಗಳನ್ನು ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಸ್ವಾಮಿಯವರು, ಅಪರಾಧ ಸಾಬೀತು ಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿ ಮಾ. 15ರಂದು ತೀರ್ಪು ನೀಡಿದ್ದಾರೆ.
