ಸ್ಪೆಷಲ್ ನ್ಯೂಸ್ ವರದಿಯ ಫಲಶೃುತಿ !ಮಹಿಳೆಗೆ ಗುಪ್ತಾಂಗ ತೋರಿಸಿ, ಚೇಷ್ಠೆ; ಪದ್ಮನಾಭ ಸಪಲ್ಯರನ್ನು ಬಿಜೆಪಿಯಿಂದ ಉಚ್ಛಾಟನೆ. ಪಂಚಾಯತ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ಸೂಚನೆ.

ಕರಾವಳಿ

ಬಿಜೆಪಿ ಸದಸ್ಯ ಪದ್ಮನಾಭನ ವಿಕೃತ ಚೇಷ್ಟೆ, ಮಹಿಳೆಯೊಂದಿಗೆ ದಾರಿ ವಿವಾದಕ್ಕೆ ಸಂಬಂಧಿಸಿದಂತೆ ಚಡ್ಡಿ ಜಾರಿಸಿ ಮಹಿಳೆಗೆ ಗುಪ್ತಾಂಗ ತೋರಿಸಿದ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿ ಕಾರ್ಯಕರ್ತ ಪದ್ಮನಾಭ ಸಪಲ್ಯನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ.

ಮಹಿಳೆಯ ಘನತೆ, ಗೌರವಕ್ಕೆ ಧಕ್ಕೆ ತಂದ ಆರೋಪ ಹಾಗೂ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಲ್ಲಿ ಪದ್ಮನಾಭ ಸಪಲ್ಯ ಉಚ್ಚಾಟನೆ ಮಾಡಲಾಗಿದೆ. ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಲು ಸೂಚಿಸಲಾಗಿದೆ ಎಂದು ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷರಾದ ದಯಾನಂದ ಶೆಟ್ಟಿ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ.