ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡು-ಕೈಕಂಬ ನಡುವಿನ ಪರ್ಲಿಯಾ ಬಳಿ ಇಂದು ಮುಂಜಾನೆ ಮಾರುತಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಕೊಳ್ನಾಡು ಗ್ರಾಮದ ನೂಜಿಬೈಲು ಭಂಡಾರದಮನೆ ನಿವಾಸಿ ಜಯರಾಮ್ (50) ಮೃತಪಟ್ಟ ವ್ಯಕ್ತಿ.
ಜಯರಾಮ್ ಅವರು ತುಂಬೆ ಖಾಸಗಿ ಆಸ್ಪತ್ರೆಯ ಕ್ಯಾಂಟೀನ್ ನಲ್ಲಿ ಕೆಲಸ ಮಾಡುತ್ತಿದ್ದು, ಮುಂಜಾನೆ 4.30ರ ಸುಮಾರಿಗೆ ಮನೆಯಿಂದ ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
